ಬ್ರೇಕಿಂಗ್ ನ್ಯೂಸ್
23-08-24 06:15 pm Udupi Correspondent ಕ್ರೈಂ
ಉಡುಪಿ, ಆಗಸ್ಟ್.23: ಆನ್‌ಲೈನ್ ಮೂಲಕ ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿ 13 ಲಕ್ಷ ರೂ. ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ ಗೆ ಸೇರಿಸಿ ಹಣ ಹೂಡುವಂತೆ ನಂಬಿಸಿದ್ದರು, ಅಲ್ಲದೆ, ಮೋತಿಲಾಲ್ ಓಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ ನ ಅಕೌಂಟ್ ನಂಬರ್ ನೀಡಿದ್ದಾರೆ. ವಾಟ್ಸ್ಯಾಪ್ ನಲ್ಲಿ ಟ್ರೇಡಿಂಗ್ ಹಾಗೂ ಲಾಭಾಂಶಗಳ ಬಗ್ಗೆ ನಂಬಿಸಿ, ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಡೆಪಾಸಿಟ್ ಮಾಡಿಸಿದ್ದಾರೆ. ಆದರೆ ಹಣ ಹಿಂಪಡೆಯಲು ಸಾಧ್ಯವಾಗದೆ ಉಪೇಂದ್ರ ಭಟ್ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ಈ ಬಗ್ಗೆ ವಿಶೇಷ ತಂಡ ರಚಿಸಿದ ಉಡುಪಿ ಪೊಲೀಸರು, ಆರೋಪಿಗಳ ಪೈಕಿ ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲಿದ್ ಬಿ. (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 ) ಎಂಬವರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಪ್ರಕರಣದ ಪ್ರಮುಖ ಸೂತ್ರಧಾರಿಗಳು ತಲೆಮರೆಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಮಾರ್ಗದರ್ಶನದಲ್ಕಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಯ್ಯ ಟಿ.ಎಸ್., ಪರಮೇಶ್ವರ ಹೆಗಡೆ , ಸೆನ್ ಠಾಣೆಯ ನಿರೀಕ್ಷಕ ರಾಮಚಂದ್ರ ನಾಯಕ್, ಎಎಸ್ಐ ರಾಜೇಶ್ , ಸಿಬ್ಬಂದಿಗಳಾದ ಪ್ರವೀಣ ಕುಮಾರ್, ಅರುಣ ಕುಮಾರ್, ವೆಂಕಟೇಶ್, ಯತೀನ್ ಕುಮಾರ್, ರಾಘವೇಂದ್ರ, ಪ್ರಶಾಂತ್ ಪ್ರಸನ್ನ ಸಿ ಸಲ್ಮಾನ್, ಚಾಲಕ ಸುದೀಪ್ ಕಾರ್ಯಾಚರಣೆ ನಡೆಸಿದ್ದಾರೆ.
The Udupi police have arrested four persons and seized Rs 13 lakh from them in connection with the online fraud case. The cash has been seized.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm