ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm