ಬ್ರೇಕಿಂಗ್ ನ್ಯೂಸ್
10-12-20 10:38 am Headline Karnataka News Network ಕ್ರೈಂ
ನಾಗಪುರ, ಡಿ.9: ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೋಬ್ಡೆ ಅವರ ತಾಯಿಗೆ, 2.5 ಕೋಟಿ ರೂ. ಹಣವನ್ನು ವಂಚಿಸಿದ ಆರೋಪದಲ್ಲಿ ಅವರ ಕುಟುಂಬದ ಆಸ್ತಿಯ ಉಸ್ತುವಾರಿದಾರನೊಬ್ಬನನ್ನು ಬಂಧಿಸಲಾಗಿದೆಯೆಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಆರೋಪಿ ತಪಸ್ ಘೋಷ್ (49) ನನ್ನು ಮಂಗಳವಾರ ರಾತ್ರಿ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಡಿಸಿಪಿ ವಿನಿತಾ ಸಾಹು ಮೇಲ್ವಿಚಾರಣೆಯಲ್ಲಿ ನಾಗಪುರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಬೋಬ್ಡೆ ಅವರ ಕುಟುಂಬವು ಆಕಾಶವಾಣಿ ಚೌಕದ ಸಮೀಪದ ತಮ್ಮ ನಿವಾಸಕ್ಕೆ ತಾಗಿಕೊಂಡಿರುವ ಜಾಗದಲ್ಲಿ ಸೇಡನ್ ಲಾನ್ ಎಂಬ ಭವನವನ್ನು ಹೊಂದಿದ್ದು, ಅದನ್ನು ವಿವಿಧ ಕಾರ್ಯಕ್ರಮಗಳಿಗೆ ಬಾಡಿಗೆಗೆ ನೀಡಲಾಗುತ್ತಿತ್ತು.

ಸಿಜೆಐ ಅವರ ವಯೋವೃದ್ಧ ತಾಯಿ ಮುಕ್ತಾ ಬೋಬ್ಡೆ ಅವರು ಈ ಆಸ್ತಿಯ ಮಾಲಕಿಯಾಗಿದ್ದು, ಅವರ ಕುಟುಂಬವು ಸ್ಥಳೀಯ ಫ್ರೆಂಡ್ಸ್ ಕಾಲನಿಯ ನಿವಾಸಿ ತಪಸ್ ಘೋಷ್ ಎಂಬಾತನನ್ನು ಅದರ ಉಸ್ತುವಾರಿಗೆ ನೇಮಿಸಿತ್ತು. ಕಳೆದ 10 ವರ್ಷಗಳಿಂದ ಘೋಷ್ ಆ ಕಟ್ಟಡ ನಿವೇಶನದ ಆಡಳಿತ ನಿರ್ವಹಣೆ ಮಾಡುತ್ತಿದ್ದ ಮತ್ತು ಹಣಕಾಸು ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮುಕ್ತಾ ಬೋಬ್ಡೆ ಅವರ ವೃದ್ಧಾಪ್ಯ ಹಾಗೂ ಅನಾರೋಗ್ಯವನ್ನು ದುರುಪಯೋಗಪಡಿಸಿಕೊಂಡ ಘೋಷ್, ಸೇಡನ್ ಲಾನ್‌ನ ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಂಚನೆ ಬೆಳಕಿಗೆ ಬಂದ ಬಳಿಕ ಪೊಲೀಸರು ಅರ್ಥಿಕ ಅಪರಾಧ ದಳದ ಸಿಬ್ಬಂದಿ ಒಳಗೊಂಡಿರುವ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಆರೋಪಿ ಘೋಷ್‌ನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Chief Justice of India Sharad Arvind Bobde's mother has allegedly been duped to the tune of Rs 2.5 crore by the caretaker of family property.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am