ಬ್ರೇಕಿಂಗ್ ನ್ಯೂಸ್
21-09-24 10:56 pm Mangalore Correspondent ಕ್ರೈಂ
ಮಂಗಳೂರು, ಸೆ.21: ಮೂಡುಬಿದ್ರೆ ಠಾಣೆ ವ್ಯಾಪ್ತಿಯ ಮಾರ್ಪಾಡಿ ಹಾಗೂ ಮೂಡು ಮಾರ್ನಾಡಿನಲ್ಲಿ ವೃದ್ಧ ಮಹಿಳೆಯರಿಬ್ಬರ ಚಿನ್ನದ ಸರವನ್ನು ಕಿತ್ತುಕೊಂಡು ಸ್ಕೂಟರಿನಲ್ಲಿ ಪರಾರಿಯಾಗಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಹಬೀಬ್ ಹಸನ್ (42) ಮತ್ತು ಬಂಟ್ವಾಳ ಜೋಡುಮಾರ್ಗ ನಿವಾಸಿ ಉಮ್ಮರ್ ಸಿಯಾಫ್ ಅಲಿಯಾಸ್ ಚಿಯಾ (29) ಬಂಧಿತರು. ಇವರು ಕಳೆದ ಆಗಸ್ಟ್ 15ರಂದು ಮಾರ್ಪಾಡಿ ಗ್ರಾಮದ ನಿರ್ಮಲ ಪಂಡಿತ್ (70) ಎಂಬವರ ಕುತ್ತಿಗೆಯಿಂದ 24 ಗ್ರಾಮ್ ತೂಕದ ಚಿನ್ನದ ಸರವನ್ನು ಕಿತ್ತು ಎಸ್ಕೇಪ್ ಆಗಿದ್ದರು. ಮೂಡು ಮಾರ್ನಾಡು ಗ್ರಾಮದ ಬಸದಿ ಬಳಿ ಸೆ.2ರಂದು 82 ವರ್ಷದ ಪ್ರೇಮಾ ಎಂಬವರ ಕುತ್ತಿಗೆಯಿಂದ ಮೂರು ಪವನ್ ತೂಕದ ಚಿನ್ನದ ಸರವನ್ನು ಸ್ಕೂಟರಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಎಗರಿಸಿ ಪರಾರಿಯಾಗಿದ್ದರು. ಎರಡೂ ಘಟನೆ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಬೀಬ್ ಹಸನ್ ಈ ಹಿಂದೆ ಹಲವಾರು ದರೋಡೆ, ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಕೇಸು ಎದುರಿಸುತ್ತಿದ್ದಾನೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಟಿವಿಎಸ್ ಜುಪಿಟರ್ ಸ್ಕೂಟರ್ ವಶಕ್ಕೆ ಪಡೆದಿದ್ದು ಅದು ಕದ್ರಿ ಪೊಲೀಸ್ ಠಾಣೆಯಿಂದ ಕಳವಾಗಿರುವ ಸ್ಕೂಟರ್ ಆಗಿರುತ್ತದೆ. ಸ್ಕೂಟರ್ ಮತ್ತು ಚಿನ್ನದ ಸರಗಳನ್ನು ವಶಕ್ಕೆ ಪಡೆದಿದ್ದು ಒಟ್ಟು 2.50 ಲಕ್ಷ ಮೌಲ್ಯದ ಸೊತ್ತು ವಶಕ್ಕೆ ಪಡೆಯಲಾಗಿದೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ., ಎಎಸ್ಐ ಮೋಹನದಾಸ್ ಕೋಟ್ಯಾನ್, ಎಎಸ್ಐ ಪ್ರಶಾಂತ್, ಅಪರಾಧ ವಿಭಾಗದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹ್ಮದ್, ನಾಗರಾಜ್, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Gold jewellery theft of old women, natorious thief arrested from ullal in Mangalore by Moodbidri police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm