ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm