ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 06:57 pm
Mangalore Correspondent
Mangalore, Suhas Shetty Murder, Anti Communia...
03-05-25 02:58 pm
Mangalore Suhas Shetty Murder, Instagram, Pol...
02-05-25 10:47 pm
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm