ಬ್ರೇಕಿಂಗ್ ನ್ಯೂಸ್
19-10-24 02:38 pm HK News Desk ಕ್ರೈಂ
ಬೆಳಗಾವಿ, ಅ 19: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 2.73 ಕೋಟಿ ರೂ. ಹಣ ಜಪ್ತಿ ಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಗೂಡ್ಸ್ ವಾಹನದಲ್ಲಿ ಕೋಟಿಗಟ್ಟಲೇ ನಗದು ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನದ ಚಾಲಕನನ್ನು ವಶಕ್ಕೆ ಪಡೆದು ಹಣ ಜಪ್ತಿ ಮಾಡಿದ್ದಾರೆ. ಸಾಂಗ್ಲಿ ಪಟ್ಟಣದ ಸಚಿನ ಮೇನಕುದುಳೆ ಹಾಗೂ ಮಾರುತಿ ಮಾರಗುಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.



ಹಣ ಸಾಗಾಟ ಮಾಡಲು ಗೂಡ್ಸ್ ವಾಹನದ ಕ್ಯಾಬಿನ್‌ಅನ್ನೇ ಮಾಡಿಫೈ ಮಾಡಿಕೊಂಡಿದ್ದರು. ಜಪ್ತಿಯಾದ ಹಣದ ಮೂಲ ಯಾವುದು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ರೋಹನ್ ಜಗದೀಶ್ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ವಾಹನವನ್ನು ಮಹಾರಾಷ್ಟ್ರದ ಸಾಂಗಲಿ ನಗರದಿಂದ ಹುಬ್ಬಳ್ಳಿ ಕಡೆಗೆ ಸಾಗಿಸಲಾಗುತ್ತಿತ್ತು ಎಂದು ಬಂಧಿತರು ಬಾಯಿ ಬಿಟ್ಟಿದ್ದಾರೆ. ವಾಹನ ಚಾಲಕ ಸಾಂಗಲಿಯ ಸಚಿನ್ ಮೇಬಕುದಳಿ, ಕ್ಲೀನರ್ ಮಾರುತಿ ಮಾರಗುಡೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಚುನಾವಣಾಧಿಕಾರಿಗಳು ಹದ್ದಿನ ಕಣ್ಣುಗಳನ್ನು ಇಟ್ಟಿದ್ದಾರೆ. ಹೀಗಾಗಿ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದಲ್ಲಿರುವ ಬೆಳಗಾವಿಯಲ್ಲಿ 2.73 ಕೋಟಿ ಸೀಜ್ ಆಗಿದ್ದು,ಹಲವು ಅನುಮಾನಗಳಿಗೆ ಕಾರಣವಾಗಿದೆ.
City Crime Branch police seized cash of Rs 2,73,27,500 that was being transported illegally without documents. The cash was hidden under modified cabin of a goods truck while being transported from Sangli to Hubballi on the Pune-Bengaluru national highway.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am