ಬ್ರೇಕಿಂಗ್ ನ್ಯೂಸ್
29-10-24 12:38 pm Mangalore Correspondent ಕ್ರೈಂ
ಮಂಗಳೂರು, ಅ.29: ಕಟೀಲು ಬಳಿಯ ಕೊಂಡೆಮೂಲ ಗ್ರಾಮದಲ್ಲಿ ತಾರನಾಥ (45) ಎಂಬ ವ್ಯಕ್ತಿಯೊಬ್ಬರು ಮನೆ ಬಳಿಯ ಗುಡ್ಡದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಮನೆಮಂದಿ ಕೊಲೆ ಶಂಕೆ ವ್ಯಕ್ತಪಡಿಸಿ ಬಜ್ಪೆ ಠಾಣೆಗೆ ದೂರು ನೀಡಿದ್ದಾರೆ.
ತಾರನಾಥ್ ತೀವ್ರ ಕುಡಿತದ ಚಟ ಹೊಂದಿದ್ದು, ಶನಿವಾರ ಸಂಜೆ ಮನೆಯಲ್ಲಿ ಪತ್ನಿ ಜೊತೆಗೆ ಗಲಾಟೆ ಮಾಡಿ ತೆರಳಿದ್ದರು ಎನ್ನಲಾಗಿದೆ. ಅಂದು ರಾತ್ರಿ ವೇಳೆ ಮನೆಗೆ ಮರಳಿರಲಿಲ್ಲ. ಹೀಗಾಗಿ ಮನೆಯ ಮಕ್ಕಳು ಹತ್ತಿರದ ಸಂಬಂಧಿಕರ ಮನೆಗಳಿಗೆ ಫೋನ್ ಮಾಡಿ, ತಂದೆ ಬಂದಿದ್ದಾರೆಯೇ ಎಂದು ವಿಚಾರಿಸಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಯ ಗುಡ್ಡದಲ್ಲಿ ತಾರನಾಥ ಅವರ ಶವ ಪತ್ತೆಯಾಗಿದ್ದು, ಕುತ್ತಿಗೆ ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.
ಕುತ್ತಿಗೆಯನ್ನು ಕೇಬಲ್ ವಯರ್ ಮಾದರಿಯ ಹಗ್ಗದಿಂದ ಬಿಗಿದಿರುವಂತೆ ಕಂಡುಬಂದಿದ್ದು, ಹೀಗಾಗಿ ಯಾರೋ ಕೊಲೆ ಮಾಡಿರಬೇಕೆಂದು ಶಂಕಿಸಲಾಗಿದೆ. ಮುನ್ನಾ ದಿನ ಸಂಜೆ 6.30ರ ವೇಳೆಗೆ ಆ ದಾರಿಯಲ್ಲಿ ತೆರಳಿದ್ದನ್ನು ಇವರ ಅಣ್ಣ ನೋಡಿದ್ದರು. ಮರುದಿನ ಇವರ ಶವ ನಾಲಗೆ ಎಳೆದುಕೊಂಡು ಕುತ್ತಿಗೆಯನ್ನು ಕೇಬಲ್ ವಯರಿನಲ್ಲಿ ಬಿಗಿದ ರೀತಿ ಪತ್ತೆಯಾಗಿದೆ. ಈ ಬಗ್ಗೆ ತಾರನಾಥ ಅವರ ಪುತ್ರಿ ಬಜ್ಪೆ ಠಾಣೆಗೆ ದೂರು ನೀಡಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆಸುಪಾಸಿನವರನ್ನು ವಿಚಾರಣೆ ನಡೆಸಿದ್ದು, ಕೊಲೆಯೋ, ಆತ್ಮಹತ್ಯೆಯೋ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕುತ್ತಿಗೆ ಬಿಗಿದ ರೀತಿ ಇದ್ದು, ಆತ್ಮಹತ್ಯೆ ಆಗಿರಲಿಕ್ಕಿಲ್ಲ ಎಂದು ಹೇಳಲು ಬರುವುದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Body of 45 year old man found in mysterious way at Kateel in Mangalore, murder suspected. The deceased has been identified as Taranath.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm