ಬ್ರೇಕಿಂಗ್ ನ್ಯೂಸ್
22-11-24 01:33 pm Mangalore Correspondent ಕ್ರೈಂ
ಮಂಗಳೂರು, ನ 22: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದು, ಆಕೆ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಶಿಕ್ಷೆ 50 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶಿಸಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ನಿವಾಸಿ ಶಿಕ್ಷೆಗೊಳಗಾದ ಅಪರಾಧಿ.
2021ರ ಡಿಸೆಂಬರ್‌ನಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿ ತನ್ನ ಮನೆಯ ಹತ್ತಿರದ ಆರೋಪಿಯ ಮನೆಗೆ ಟಿವಿ ನೋಡಲು ಹೋಗಿದ್ದಳು. ಈ ವೇಳೆ ಆರೋಪಿ, ಅಂಗಡಿಗೆ ಹೋಗೋಣ ಎಂದು ಯಾರೂ ವಾಸವಿಲ್ಲದ ಅಜ್ಜಿ ಮನೆಗೆ ಆಕೆಯನ್ನು ಕರೆದೊಯ್ದಿದ್ದ. ಅಲ್ಲಿ ಅತ್ಯಾಚಾರ ಎಸಗಿ ಯಾರಿಗೂ ಹೇಳದಂತೆ ಹೆದರಿಕೆ ಹಾಕಿದ್ದ ಎಂದು ದೂರು ದಾಖಲಾಗಿತ್ತು.
ಬಳಿಕ ಪದೇ ಪದೇ ತನ್ನ ಮನೆ ಹಾಗೂ ಅಜ್ಜಿ ಮನೆಯಲ್ಲಿ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಪರಿಣಾಮ 2022ರ ಆಗಸ್ಟ್ ತಿಂಗಳಲ್ಲಿ ಬಾಲಕಿ ಗರ್ಭಿಣಿಯಾಗಿದ್ದಳು. ಆರೋಪಿ ತನ್ನ ತಾಯಿಗೆ ಈ ವಿಷಯ ತಿಳಿಸಿ, ಗರ್ಭಪಾತ ಮಾಡಿಸಲು ಪ್ಲ್ಯಾನ್ ಮಾಡಿದ್ದ. ಆಸ್ಪತ್ರೆಯವರನ್ನು ಪತಿ-ಪತ್ನಿಯೆಂದು ನಂಬಿಸಲು ಬಾಲಕಿಗೆ ಕಾಲುಂಗರ, ಕರಿಮಣಿ ಸರ ಹಾಕಿ ಫೋಟೋ ತೆಗೆಸಿದ್ದರು. ಬಾಲಕಿಯ ತಾಯಿಗೆ ಮದುವೆಗೆ ಕರೆದೊಯ್ಯುವುದಾಗಿ ತಿಳಿಸಿ, ಸಂತ್ರಸ್ತೆಯನ್ನು 2022ರ ಡಿಸೆಂಬರ್ 17ರಂದು ಚಿಕ್ಕಮಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾನೆ. ಅಲ್ಲಿ ಗರ್ಭಪಾತ ಮಾಡಿಸಿದ್ದನು ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿತ್ತು. ಆಗಿನ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ಮತ್ತು ಸತ್ಯನಾರಾಯಣ ಕೆ. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪಿತರ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಅತ್ಯಾಚಾರ ಅಪರಾಧಕ್ಕೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಮತ್ತು 40,000 ರೂ. ದಂಡ, ಸಾಕ್ಷ್ಯನಾಶ ಮಾಡಿದ ಅಪರಾಧಕ್ಕೆ 3 ವರ್ಷಗಳ ಸಾದಾ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಲಾಗಿದೆ. ದಂಡದ ಹಣ 50,000 ರೂ. ನೊಂದ ಬಾಲಕಿಗೆ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಬಾಲಕಿಗೆ ಹೆಚ್ಚುವರಿಯಾಗಿ 2,00,000 ರೂ. ಹಣದ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನೀಡುವಂತೆ ತೀರ್ಪಿನಲ್ಲಿ ನ್ಯಾಯಾಧೀಶ ಮಾನು ಕೆ.ಎಸ್. ನಿರ್ದೇಶಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಬದರಿನಾಥ ನಾಯರಿ ವಾದ ಮಂಡಿಸಿದ್ದಾರೆ.
Mangalore Belthangady rape and abortion, accused sentenced to 20 years imprisonment by Mangalore court. In December 2021 accused had raped the minor girl by taking her to his grandmothers house.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am