ಬ್ರೇಕಿಂಗ್ ನ್ಯೂಸ್
26-11-24 03:10 pm Mangalore Correspondent ಕ್ರೈಂ
ಉಳ್ಳಾಲ, ನ.26: ಪಜೀರು ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಸುಮಾರು ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶ ಪಡಿಸಿಕೊಳ್ಳಲಾಗಿದೆ.
ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್ (22) , ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್ (27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್ (28) ಬಂಧಿತ ಆರೋಪಿಗಳು. ಸೋಮವಾರ ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಆರೋಪಿಗಳು ಕಾರಿನಲ್ಲಿ ಎಂಡಿಎ ಡ್ರಗ್ಸ್ ಮಾರುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.

ಬಂಧಿತರಿಂದ 1,50,000/- ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಉಪಯೋಗಿಸಿದ ಬಿಳಿ ಬಣ್ಣದ ಬೆಲೆನೋ ಕಾರು ಮತ್ತು 03 ಮೊಬೈಲ್ ಫೋನ್‌ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ 7,76,980/- ಮೌಲ್ಯ ಆಗಿದೆ. ಆರೋಪಿಗಳ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 138/2024 ಕಲಂ 8(c) 22(c) NDPS act 1985 ರಂತೆ ಪ್ರಕರಣ ದಾಖಲಾಗಿದೆ.
ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಧನ್ಯ ಎನ್.ನಾಯಕ್ ನೇತೃತ್ವದಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕರಾದ ರಾಜೇಂದ್ರ,ಬಿ. ಪಿಎಸ್ಸೈ ನಾಗರಾಜ.ಎಸ್, ಮತ್ತು "ಆಂಟಿ ಡ್ರಗ್" ತಂಡದ ಪಿಎಸ್‌ಐ ಪುನೀತ್ , ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ರೇಜಿ ,ಶಿವಕುಮಾರ್, ಅಕ್ಬರ್ ,ರೇಷ್ಮಾ, ರಾಮ ನಾಯಕ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Acp Dhanya Nayak along with anti drugs team raid, three drug peddlers arrested in Pajir Mangalore. car and drugs worth 1.5 lakhs has been seized
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm