ಬ್ರೇಕಿಂಗ್ ನ್ಯೂಸ್
08-12-24 05:02 pm HK News Desk ಕ್ರೈಂ
ಚಿಕ್ಕಮಗಳೂರು, ಡಿ 08: ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಗೃಹಿಣಿಯನ್ನ ಮಕ್ಕಳ ಎದುರೇ ಪ್ರಿಯಕರ ಚಾಕುವಿನಿಂದ ಇರಿದು, ಕೆರೆಗೆ ಬಿಸಾಡಿ ಹತ್ಯೆ ಮಾಡಿರುವ ಘಟನೆ ಕಿಚ್ಚಬ್ಬಿಯಲ್ಲಿ ನಡೆದಿದೆ.
ಕಿಚ್ಚಬ್ಬಿ ಗ್ರಾಮದ ರಾಜೇಶ್ ಅವರ ಪತ್ನಿ ತೃಪ್ತಿ (26) ಕೊಲೆಯಾಗಿರುವ ಗೃಹಿಣಿ. ಆರೋಪಿ ಚಿರಂಜೀವಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಪ್ಪ ತಾಲೂಕಿನ ಹೇರೂರು ಸಮೀಪದ ಸ್ಥಿರೂರಿನ ತೃಪ್ತಿ ಅವರನ್ನು ಕಿಚ್ಚಬ್ಬಿಯ ರಾಜೇಶ್ ವಿವಾಹವಾಗಿದ್ದು ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಚನ್ನಗಿರಿಯ ಚಿರಂಜೀವಿ ಬೆಂಗಳೂರಿನಲ್ಲಿ ಗ್ಯಾಸ್ ಏಜೆನ್ಸಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ತೃಪ್ತಿಗೆ ಪರಿಚಯವಾಗಿತ್ತು.
ಪರಿಚಯ ಪ್ರೀತಿಗೆ ತಿರುಗಿ ತೃಪ್ತಿ ಮಕ್ಕಳನ್ನು ಬಿಟ್ಟು ತಿಂಗಳ ಹಿಂದೆ ಚಿರಂಜೀವಿಯೊಂದಿಗೆ ನಾಪತ್ತೆಯಾಗಿದ್ದರು. ಪತಿ ರಾಜೇಶ್ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತೃಪ್ತಿ ಮತ್ತು ಚಿರಂಜೀವಿಯನ್ನು ಬೆಂಗಳೂರಿನ ವಿಜಯಪುರದಲ್ಲಿ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆತಂದು ಆಕೆಯ ಮನವೊಲಿಸಿ ಪತಿಯೊಂದಿಗೆ ಕಳುಹಿಸಿದ್ದರು.
ಬಳಿಕ ಚಿರಂಜೀವಿಯೊಂದಿಗಿನ ಮೊಬೈಲ್, ದೂರವಾಣಿ ಸೇರಿ ಎಲ್ಲ ಸಂಪರ್ಕವನ್ನೂ ಕಡಿತಗೊಳಿಸಿದ್ದರು. ಇದರಿಂದ ಕುಪಿತಗೊಂಡ ಚಿರಂಜೀವಿ, ಪತಿ ರಾಜೇಶ್ ಕೆಲಸಕ್ಕೆ ಹೋಗಿದ್ದಾಗ ಮನೆಗೆ ಹೋಗಿ ಎರಡೂವರೆ ವರ್ಷದ ಮಗಳ ಎದುರಿಗೇ ತೃಪ್ತಿಗೆ ಇರಿದಿದ್ದಾನೆ. ಕೂಗಿಕೊಂಡರೂ ಬಿಡದೆ ಸುಮಾರು 500 ಮೀಟರ್ ದೂರ ಕಾಫಿ ತೋಟಕ್ಕೆ ಎಳೆದೊಯ್ದು ಅಲ್ಲಿದ್ದ ಕೆರೆಯಲ್ಲಿ ಎಸೆದು ಪರಾರಿಯಾಗಿದ್ದಾನೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಶ್ವಾನದಳ, ಬೆರಳಚ್ಚು ತಜ್ಞರನ್ನು ಕರೆಸಿದ ಪೊಲೀಸರು ತನಿಖೆ ಆರಂಭಿಸಿದರು. ಹೆಚ್ಚುವರಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಜಿ.ಕೃಷ್ಣಮೂರ್ತಿ, ಡಿವೈಎಸ್ಪಿ ಬಾಲಾಜಿ ಸಿಂಗ್, ಇನ್‌ಸ್ಪೆಕ್ಟರ್ ಗುರುದತ್ ಕಾಮತ್, ಸಬ್‌ಇನ್‌ಸ್ಪೆಕ್ಟರ್ ರವೀಶ್, ನಿರಂಜನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಯ ಪತ್ತೆಗೆ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಮ ಅಮಟೆ ನಾಲ್ಕು ತಂಡಗಳನ್ನು ರಚಿಸಿದ್ದರು. ಸಂಜೆ ವೇಳೆಗೆ ಚಿರಂಜೀವಿಯನ್ನು ಬಂಧಿಸಿದ್ದಾರೆ
Chikkamagaluru murder, house wife murdered by lover, body found in lake. The deceased has been identified as Trupti. She was in affair with a guy whom she found on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm