ಬ್ರೇಕಿಂಗ್ ನ್ಯೂಸ್
08-01-25 03:14 pm Udupi Correspondent ಕ್ರೈಂ
ಕಾರ್ಕಳ, ಜ 08: ಸಿಬಿಐ ಹೆಸರಲ್ಲಿ ಬೆದರಿಸಿ ಕಾರ್ಕಳದ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ವರದಿಯಾಗಿದೆ.
ಜ.7ರಂದು ಪ್ರೀಮ ಶರಿಲ್ ಡಿಸೋಜ (38) ಅವರಿಗೆ ಟೆಲಿಕಾಂ ಕಂಪೆನಿಯಿಂದ ಕರೆ ಮಾಡುವುದಾಗಿ ತಿಳಿಸಿದ ವ್ಯಕ್ತಿಯೊಬ್ಬ ನಿಮ್ಮ ಆಧಾರ್ ಕಾರ್ಡ್ ನಂಬರ್‌ನಿಂದ ಉತ್ತರ ಪ್ರದೇಶದಲ್ಲಿ ಬೇರೆ ಸಿಮ್ ಖರೀದಿಸಿ ಬೇರೆ ಬೇರೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ನಿಮ್ಮ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿರುತ್ತದೆ ಎಂದು ಹೆದರಿಸಿದ್ದಾನೆ.
ಈ ಸಂಬಂಧ ಸೈಬರ್ ಅಧಿಕಾರಿ ನಿಮ್ಮ ಜತೆಗೆ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ. ವೀಡಿಯೋ ಕಾಲ್ ಮಾಡಿ ಪೊಲೀಸ್ ಸಮವಸ್ತ್ರ ಧರಿಸಿದ ವ್ಯಕ್ತಿಯು ತಾನು ಸಿಬಿಐ ಅಧಿಕಾರಿ ಎಂದು ತಿಳಿಸಿ ನೀವು ತನಿಖೆಗೆ ಸಹಕರಿಸಬೇಕು. ಈ ವಿಚಾರವನ್ನು ಯಾರ ಬಳಿಯಲ್ಲಿಯೂ ಹೇಳುವಂತಿಲ್ಲ ಹೇಳಿದರೆ ನಿಮ್ಮ ಗಂಡ ಮತ್ತು ಮಗುವಿಗೆ ತೊಂದರೆಯಾಗುತ್ತದೆ ಎಂದು ಬೆದರಿಸಿದ್ದಾನೆ. ಶರಿಲ್ ಅವರ ಬ್ಯಾಂಕ್ ಖಾತೆಗಳಲ್ಲಿರುವ ಹಣದ ವಿವರ ಪಡೆದುಕೊಂಡು ಹಣವನ್ನು ತಿಳಿಸಿದ ಖಾತೆಗೆ ವರ್ಗಾವಣೆ ಮಾಡಬೇಕು ಇಲ್ಲವಾದರೆ ಅರೆಸ್ಟ್ ವಾರಂಟ್ ಕಳುಹಿಸುತ್ತೇವೆ ಎಂದು ಹೆದರಿಸಲಾಗಿದೆ. ಇದರಿಂದ ಆತಂಕಗೊಂಡ ಮಹಿಳೆ ಫೆಡರಲ್ ಬ್ಯಾಂಕ್‌ನ ಖಾತೆಗೆ 14 ಲಕ್ಷ ರೂ. ಮತ್ತು ಯೆಸ್ ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಣವನ್ನು ಎಫ್‌ಡಿ ಖಾತೆಯಿಂದ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿ ಮೋಸ ಹೋಗಿದ್ದಾರೆ.
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Karkala women looses 24 lakhs falling prey to cyber frauds as CBI officers. A case has been registered at the cyber police station in Karkala. Sharil Dsouza is the victim who fell prey to the cyber fruads who called her stating of misue of Aadhar.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am