ಬ್ರೇಕಿಂಗ್ ನ್ಯೂಸ್
09-01-25 11:27 am Mangaluru Correspondent ಕ್ರೈಂ
ಮಂಗಳೂರು, ಜ.9: ಆಟಿಕೆ ಪಿಸ್ತೂಲ್ ಹಾರಿ ಗಾಯಗೊಂಡಿದ್ದಾಗಿ ಹೇಳಲಾಗಿದ್ದ ಸುದ್ದಿಗೆ ಟ್ವಿಸ್ಟ್ ಸಿಕ್ಕಿದೆ. ಪರವಾನಗಿ ಇಲ್ಲದ ಪಿಸ್ತೂಲ್ ಮತ್ತು ಅದು ರೌಡಿಶೀಟರ್ ವ್ಯಕ್ತಿಯದ್ದು ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸೋಮವಾರ ಸಂಜೆ ವಾಮಂಜೂರಿನ ರಿಟೇಲ್ ಅಂಗಡಿಯೊಂದರಲ್ಲಿ ಪಿಸ್ತೂಲ್ ಹಾರಿ ಸಫ್ವಾನ್ (37) ಎಂಬ ವ್ಯಕ್ತಿ ಗಾಯಗೊಂಡಿದ್ದರು. ಮೊದಲಿಗೆ ಟೇಬಲ್ ಮೇಲಿಟ್ಟಿದ್ದ ಗನ್ ಅನ್ನು ಸಫ್ವಾನ್ ಆಟಿಕೆಯೆಂದು ಟ್ರಿಗ್ಗರ್ ಒತ್ತಿ ಗಾಯಕ್ಕೀಡಾಗಿದ್ದರು ಎಂದು ಹೇಳಲಾಗಿತ್ತು. ಈ ಬಗ್ಗೆ ಗ್ರಾಮಾಂತರ ಠಾಣೆ ಪೊಲೀಸರು ಸರಿಯಾದ ತನಿಖೆ ಮಾಡಿರದ ಕಾರಣ ನೈಜ ವಿಚಾರ ಏನೆಂದು ತಿಳಿದುಬಂದಿರಲಿಲ್ಲ. 24 ಗಂಟೆ ಕಳೆದರೂ ಪ್ರಕರಣ ದಾಖಲಾಗಿರಲಿಲ್ಲ.
ಎರಡು ದಿನ ಕಳೆದಾಗ, ಲೈಸನ್ಸ್ ಹೊಂದಿಲ್ಲದ ನೈಜ ಪಿಸ್ತೂಲ್ ಎನ್ನುವ ವಿಚಾರ ತಿಳಿದುಬಂದಿದ್ದು ಅಲ್ಲದೆ, ಇದನ್ನು ಅಕ್ರಮವಾಗಿ ರೌಡಿಶೀಟರ್ ಅದ್ದು ಯಾನೆ ಬದ್ರುದ್ದೀನ್ ಇಟ್ಟುಕೊಂಡಿದ್ದ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಪಿಸ್ತೂಲನ್ನು ಇಮ್ರಾನ್ ಎಂಬಾತ ನೀಡಿದ್ದಾನೆ ಎನ್ನಲಾಗುತ್ತಿದ್ದು ಪೊಲೀಸರು ಕೇಸು ದಾಖಲಿಸುತ್ತಿದ್ದಂತೆ ಇಬ್ಬರೂ ನಾಪತ್ತೆಯಾಗಿದ್ದಾರೆ.
ಬದ್ರುದ್ದೀನ್ ರಿಟೇಲ್ ಮಳಿಗೆ ಹೊಂದಿದ್ದು ಪಿಸ್ತೂಲ್ ಅನ್ನು ಪರಿಶೀಲಿಸುವ ನೆಪದಲ್ಲಿ ಟ್ರಿಗ್ಗರ್ ಒತ್ತಿದ್ದಾನೆ. ಈ ವೇಳೆ, ಅಂಗಡಿಯ ಹೊರಭಾಗದಲ್ಲಿ ಕುಳಿತಿದ್ದ ಮೊಹಮ್ಮದ್ ಸಫ್ವಾನ್ ಹೊಟ್ಟೆಗೆ ತಗಲಿದೆ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಗ್ರಾಮಾಂತರ ಠಾಣೆ ಪೊಲೀಸರು ಬದ್ರುದ್ದೀನ್ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ. ರೌಡಿಶೀಟರ್ ವ್ಯಕ್ತಿ ಅಕ್ರಮವಾಗಿ ಪಿಸ್ತೂಲ್ ಹೊಂದಿದ್ದು ಹೇಗೆ ಎನ್ನುವ ಬಗ್ಗೆ ತನಿಖೆ ಆಗಬೇಕಿದೆ. ಅಲ್ಲದೆ, ಅದು ಆಟಿಕೆ ಪಿಸ್ತೂಲ್, ಸಫ್ವಾನ್ ಸ್ವತಃ ಹೊಡೆದುಕೊಂಡಿದ್ದಾಗಿ ಕತೆ ಕಟ್ಟಿದ್ದು ಯಾರು ಎನ್ನುವ ಬಗ್ಗೆ ತನಿಖೆ ಆಗಬೇಕಿದೆ.
In the recent incident at Vamanjoor, authorities have revealed that the firearm involved in the misfire was unlicensed and traced back to Rowdy Shetter, according to the Mangalore police. This shocking revelation has raised serious concerns about public safety and the presence of illegal weapons in the area.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm