ಬ್ರೇಕಿಂಗ್ ನ್ಯೂಸ್
20-01-25 07:19 pm Mangaluru Correspondent ಕ್ರೈಂ
ಮಂಗಳೂರು, ಜ.20: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಮಂಗಳೂರು ಪೊಲೀಸರು ತಮಿಳುನಾಡಿನಲ್ಲಿ ಮೂವರನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿಯ ಪದ್ಮನೇರಿ ಎಂಬಲ್ಲಿ ಮುರುಗನ್ ಡಿ. ದೇವರ್(35), ಯೋಶುವಾ ರಾಜೇಂದ್ರನ್ ಮತ್ತು ಕಣ್ಣನ್ ಮಣಿ(36) ಎಂಬ ಮೂವರನ್ನು ಅರೆಸ್ಟ್ ಮಾಡಲಾಗಿದೆ. ದರೋಡೆ ಪ್ರಕರಣ ಸಂಬಂಧಿಸಿ ಒಟ್ಟು ಎಂಟು ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಮುಂಬೈ, ಕೇರಳ, ತಮಿಳುನಾಡಿಗೆ ಪೊಲೀಸರು ತೆರಳಿದ್ದು, ಮಾಹಿತಿ ಆಧರಿಸಿ ಕಾರನ್ನು ಬೆನ್ನಟ್ಟಿ ಹೋಗಿದ್ದರು. ಈ ವೇಳೆ, ತಿರುನಲ್ವೇಲಿಯನಲ್ಲಿ ಮೂವರು ಸಿಕ್ಕಿಬಿದ್ದಿದ್ದಾರೆ ಎಂದು ಕಮಿಷನರ್ ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ ಕಾರು, ಎರಡು ಪಿಸ್ತೂಲ್, ಚೂರಿ ಮತ್ತು ಕಳವಾದ ನಗದು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಸೊತ್ತಿನ ಒಟ್ಟು ಮೌಲ್ಯ ಮಹಜರು ಬಳಿಕ ತಿಳಿಯಬೇಕಾಗಿದೆ. ಕೋಟೆಕಾರು ಬ್ಯಾಂಕಿನಿಂದ ನಾಲ್ಕು ಕೋಟಿ ರು. ಮೌಲ್ಯದ ಚಿನ್ನಾಭರಣ ದರೋಡೆಯಾಗಿತ್ತು. ಮುಂಬೈ ಮೂಲದ ಗ್ಯಾಂಗ್ ಈ ಕೃತ್ಯ ಎಸಗಿದೆ ಎಂದು ಕಮಿಷನರ್ ಅಗರ್ವಾಲ್ ತಿಳಿಸಿದ್ದಾರೆ.








ದರೋಡೆ ಬಳಿಕ ಆರೋಪಿಗಳು ಕೇರಳ ಮೂಲಕ ತಮಿಳುನಾಡಿಗೆ ಪರಾರಿಯಾಗಿದ್ದರು. ತಂಡದಲ್ಲಿ ಇನ್ನೂ ಹಲವರಿದ್ದಾರೆ, ಬಂಧಿತರಿಂದ ಮಹಾರಾಷ್ಟ್ರ ಮೂಲದ ಕಾರನ್ನು ವಶಕ್ಕೆ ಪಡೆದಿದ್ದೇವೆ, ಚಿನ್ನ ಇರುವ ಎರಡು ಗೋಣಿ ಚೀಲಗಳನ್ನು ವಶಕ್ಕೆ ಪಡೆದಿದ್ದು ಚಿನ್ನದ ಮೌಲ್ಯದ ಬಗ್ಗೆ ಇನ್ನಷ್ಟೇ ಗೊತ್ತಾಗಬೇಕಿದೆ. ಸ್ಥಳೀಯರು ಕೂಡ ಭಾಗಿಯಾಗಿರುವ ಶಂಕೆಯಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ಬಂಧಿತ ಮೂವರು ಕೂಡ ಪ್ರಮುಖ ಆರೋಪಿಗಳೇ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಆರೋಪಿಗಳು ದರೋಡೆ ಕೃತ್ಯದ ಬಳಿಕ ಕೇರಳಕ್ಕೆ ಪರಾರಿಯಾಗಿದ್ದರು ಎಂದು ಹೇಳಲಾಗಿತ್ತು. ಆನಂತರ, ಕೃತ್ಯಕ್ಕೆ ಬಳಸಿದ್ದ ಕಾರು ತಲಪಾಡಿ ಟೋಲ್ ಗೇಟ್ ನಲ್ಲಿ ಪಾಸ್ ಆಗಿರುವುದು ಪತ್ತೆಯಾಗಿತ್ತು. ಆದರೆ ಆ ಕಾರಿನಲ್ಲಿ ಚಾಲಕ ಬಿಟ್ಟರೆ ಬೇರಾವುದೇ ಪ್ರಯಾಣಿಕರು ಇರಲಿಲ್ಲ. ಹೀಗಾಗಿ ಆರೋಪಿಗಳು ಆ ಕಾರು ಬಿಟ್ಟು ಬೇರೆ ಕಾರಿನಲ್ಲಿ ತಪ್ಪಿಸಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿತ್ತು. ಇದೀಗ ಪೊಲೀಸರು ಮೂವರನ್ನು ಅರೆಸ್ಟ್ ಅಂತ ತೋರಿಸಿದ್ದು, ಪ್ರಕರಣದಲ್ಲಿ ನಾನಾ ರೀತಿಯ ಪ್ರಶ್ನೆಗಳು, ಅನುಮಾನಗಳು ಎದ್ದಿವೆ. ಇದಕ್ಕೆಲ್ಲ ಪೊಲೀಸರೇ ಉತ್ತರ ಕೊಡಬೇಕಾಗಿದೆ.
Mangalore Kotekar Bank Robbery, Three arrested from Tirunelveli in Tamil Nadu by Mangalore Police. Mangalore Kotekar Bank Robbery: Three arrested from Tirunelveli in Tamil Nadu by Mangalore Police. In a major bust, the Mangalore police have arrested three persons in connection to the Kotekar bank robbery. The arrested are identified as Murugandi Devar, Prakash Josuha, and Manivannan.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am