ಬ್ರೇಕಿಂಗ್ ನ್ಯೂಸ್
24-01-25 04:28 pm Udupi Correspondent ಕ್ರೈಂ
ಉಡುಪಿ, ಜ.24: ಸಾಲ ತೀರಿಸಿಲ್ಲ ಎಂಬ ಕೋಪದಲ್ಲಿ ಯಕ್ಷಗಾನ ಕಲಾವಿದರೊಬ್ಬರ ಮೇಲೆ ಇನ್ನೊಬ್ಬ ಕಲಾವಿದ ಸೇರಿ ಮೂವರು ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದ ಘಟನೆ ನಡೆದಿದ್ದು, ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಚಿನ್ ಅಮೀನ್ ಉದ್ಯಾವರ, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಫೈನಾನ್ಶಿಯರ್ ಹಲ್ಲೆ ಮಾಡಿದವರು. ಸಸಿಹಿತ್ಲು ಶ್ರೀ ಭಗವತಿ ಯಕ್ಷಗಾನ ಮೇಳದ ಕಲಾವಿದರಾಗಿರುವ ನಿತಿನ್ ಆಚಾರ್ಯ, ತನ್ನ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್ ಬಳಿಯಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿ ಕಟ್ಟುತ್ತಿದ್ದರು. ಪಡೆದ ಸಾಲ ಹಿಂದಿರುಗಿಸಿಲ್ಲ ಎನ್ನುವ ಕಾರಣಕ್ಕೆ ನಿತಿನ್‌ನನ್ನು ಆರೋಪಿ ಸಚಿನ್, ಆತನ ತಂದೆ ಕುಶಾಲಣ್ಣ ಹಾಗೂ ಇನ್ನೋರ್ವ ಸೇರಿ ಉದ್ಯಾವರದ ಮನೆಯೊಂದರಲ್ಲಿ ಜನವರಿ 21ರಂದು ಕಂಬಳದ ಕೋಣಗಳಿಗೆ ಹೊಡೆಯುವ ಬಾರುಕೋಲಿನಲ್ಲಿ ಹೊಡೆದು ಹಲ್ಲೆಗೈದಿದ್ದರು.
ಬೆತ್ತದಿಂದ ನಿತಿನ್ ಅವರ ಬೆನ್ನು, ಕಾಲಿಗೆ ಹೊಡೆದು ಕಾಲಿನಿಂದ ತುಳಿದು ಖಾಲಿ ಬಾಂಡ್ ಪೇಪರ್‌ಗೆ ಬಲಾತ್ಕಾರವಾಗಿ ಸಹಿ ಪಡೆದಿದ್ದಾರೆ. ಬಳಿಕ ಸಂಜೆಯ ವೇಳೆಗೆ ವಾಪಸು ಪಡುಬಿದ್ರಿಗೆ ಆರೋಪಿಗಳೇ ಕಳುಹಿಸಿಕೊಟ್ಟಿದ್ದಾರೆ. ಬೆನ್ನಿಗೆ ಬಿದ್ದ ಏಟಿನ ಗಾಯದ ನಡುವೆಯೂ ಜನವರಿ 21ರ ರಾತ್ರಿ ಪುತ್ತೂರಿನಲ್ಲಿ ನಡೆದ ಯಕ್ಷಗಾನಕ್ಕೆ ಹೋಗಿ ಅಲ್ಲಿ ನರ್ತನ ಮಾಡಿದ್ದರು. ಜನವರಿ 22ರಂದು ಬೆಳಗ್ಗೆ ನೋವು ಜಾಸ್ತಿಯಾದ್ದರಿಂದ ಪಡುಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been registered at the Padubidri police station after a Yakshagana artiste was physically assaulted by three individuals over an alleged failure to repay a loan. The victim, Nithin Kumar from Sasihitlu Mela, is a resident of Padubidri. The accused include Sachin Amin of Udyavara, his father Kushalanna, and another financier.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm