ಬ್ರೇಕಿಂಗ್ ನ್ಯೂಸ್
02-02-25 09:00 pm Bangalore Correspondent ಕ್ರೈಂ
ಬೆಂಗಳೂರು, ಫೆ 02: ಮದುವೆಗೆ ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರೂ ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭದ್ರಪ್ಪ ಲೇಔಟ್‌ನ ಮಂಜುಳಾ (45), ಮಂಗನಹಳ್ಳಿ ತಾವರೆಕೆರೆಯ ಶಿಲ್ಪಾ (45), ಎಂ.ಎಸ್.ಪಾಳ್ಯದ ಲೀಲಾವತಿ (37), ಹೆಬ್ಬಾಳದ ವಿಜಯಮ್ಮ (52) ಹಾಗೂ ಎಚ್.ವೆಂಕಟೇಶ್, ವಿದ್ಯಾರಣ್ಯಪುರದ ಎಂ.ಹರೀಶ್ (41) ಬಂಧಿತರು.
ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಎಲ್ಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಪ್ರಮುಖ ಆರೋಪಿ ಮಂಜುಳಾಗೆ ಕೆಲ ದಿನಗಳ ಹಿಂದೆ ಯುವಕನೊಬ್ಬ ಪರಿಚಯವಾಗಿದ್ದ. 'ವಧು ಹುಡುಕುತ್ತಿದ್ದು, ಕನ್ಯೆ ಇದ್ದರೆ ಹೇಳಿ' ಎಂದು ಮಂಜುಳಾ ಬಳಿ ಯುವಕ ಹೇಳಿದ್ದ. ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಮಂಜುಳಾ ಹೇಳಿದ್ದಳು. ಅದರಂತೆ ಮಂಜುಳಾ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಯುವಕ ಹೋಗಿದ್ದ.
ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ವಿಜಯಲಕ್ಷ್ಮಿ ಪರಿಚಯಿಸಿದ್ದಳು. ಕೆಲವೇ ಹೊತ್ತಿನಲ್ಲಿ ಇಬ್ಬರೂ ಮಾತನಾಡುತ್ತಿರಿ ಎಂದು ಹೇಳಿ ವಿಜಯಲಕ್ಷ್ಮಿ ಹೊರಕ್ಕೆ ಹೋಗಿದ್ದಳು. ಕೆಲವೇ ಹೊತ್ತಿನಲ್ಲಿ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಮನೆಗೆ ಬಂದಿದ್ದರು. ಮನೆಯಲ್ಲಿ ವೈಶ್ಯಾವಾಟಿಕೆ ನಡೆಯುತ್ತಿದೆ ಎಂದು ಬೆದರಿಸಿದ್ದರು. ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಬೆದರಿದ್ದ ಯುವಕ, ಫೋನ್ ಪೇ ಮೂಲಕ 50 ಸಾವಿರ ಕಳಿಸಿದ್ದಾನೆ.
ಯುವಕ ನೀಡಿದ ದೂರು ಆಧರಿಸಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.
Four women arrested by Bangalore police over honeytrap case. They also used to pose as police officers and threaten the victim and loot money. Hebbal police have arrested four in connection to this case..
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am