ಬ್ರೇಕಿಂಗ್ ನ್ಯೂಸ್
08-02-25 06:21 pm HK News Desk ಕ್ರೈಂ
ಕಲಬುರಗಿ, ಫೆ.8: ಪರ ಸ್ತ್ರೀ ಜೊತೆ ಸಲುಗೆಯಿಂದಿದ್ದ ಪತಿಯ ಕಾಲು ಮುರಿಯುವಂತೆ ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದಲ್ಲಿ ಬೆಳಕಿಗೆ ಬಂದಿದೆ.
ವೆಂಕಟೇಶ್ ಎಂಬಾತ ಎರಡು ಕಾಲು ಮುರಿತಕ್ಕೆ ಒಳಗಾದ ಪತಿಯಾಗಿದ್ದು, ಸುಪಾರಿ ನೀಡಿದ ಪತ್ನಿ ಉಮಾದೇವಿ ಹಾಗೂ ಹಂತಕರಾದ ಆರೀಫ್, ಮನಹೋರ, ಸುನೀಲ್ ಎಂಬವರನ್ನ ಪೊಲೀಸರು ಬಂಧಿಸಿದ್ದಾರೆ.
ವೆಂಕಟೇಶ್ ಕೆಲವು ತಿಂಗಳಿನಿಂದ ಮತ್ತೊಬ್ಬ ಮಹಿಳೆಯ ಜೊತೆಗೆ ಸಲುಗೆಯಿಂದ ವರ್ತಿಸುತ್ತಿದ್ದ. ಹೀಗಾಗಿ ದಂಪತಿ ನಡುವೆ ಹಲವು ಬಾರಿ ಜಗಳವಾಗಿತ್ತು. ಕೊನೆಗೆ ಮಾತು ಕೇಳದ ಪತಿಯ ಎರಡೂ ಕಾಲುಗಳನ್ನ ಮುರಿದ್ರೆ ಮನೆಯಲ್ಲಿಯೇ ಬಿದ್ದಿರುತ್ತಾನೆ ಎಂದು ಪತ್ನಿ ಸ್ಕೆಚ್ ಹಾಕಿದ್ದಾಳೆ.
ಪತಿಯ ಎರಡೂ ಕಾಲುಗಳನ್ನ ಮುರಿಯಲು ತಂಡವೊಂದಕ್ಕೆ 5 ಲಕ್ಷಕ್ಕೆ ಪತ್ನಿ ಸುಪಾರಿ ನೀಡಿದ್ದಳು. ಉಮಾದೇವಿ ನೀಡಿದ ಸುಪಾರಿ ಮೇರೆಗೆ ಆರಿಫ್, ಮನಹೋರ, ಸುನೀಲ್ ಎನ್ನುವರು ವೆಂಕಟೇಶನ ಎರಡೂ ಕಾಲು ಮುರಿದಿದ್ದಾರೆ. ಈ ಬಗ್ಗೆ ವೆಂಕಟೇಶ್ ಮಗ ಪೊಲೀಸ್ ದೂರು ನೀಡಿದ್ದು ದರೋಡೆ ಪ್ರಕರಣದ ವೇಳೆ ಕಾಲು ಮುರಿದಿದ್ದಾರೆ ಎಂದು ಹೇಳಿದ್ದ. ಪ್ರಕರಣ ದಾಖಲಿಸಿ ತನಿಖೆ ನಡೆಸಿದಾಗ ಪತ್ನಿ ಉಮಾದೇವಿಯ ಅಸಲಿ ಬಣ್ಣ ಬಯಲಾಗಿದೆ. ಸದ್ಯ ಸುಪಾರಿ ನೀಡಿದ ಪತ್ನಿ ಸೇರಿದಂತೆ ಕಾಲು ಮುರಿದ ಆರೋಪಿಗಳನ್ನ ಬ್ರಹ್ಮಾಪೂರ ಪೊಲೀಸರು ಬಂಧಿಸಿದ್ದಾರೆ.
The extortion case that took place in January under the jurisdiction of Brahmapur police station in the City has taken a turn, with the investigation revealing that the wife herself had given ‘supari’ to break her husband’s leg. The reason for this ...
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 10:46 pm
HK News Desk
ಬಂಟ್ವಾಳ ; ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಹ...
24-09-26 06:26 pm
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm