ಬ್ರೇಕಿಂಗ್ ನ್ಯೂಸ್
17-12-20 01:59 pm Bangalore Correspondent ಕ್ರೈಂ
ಬೆಂಗಳೂರು, ಡಿ.17: ಆರೆಸ್ಸೆಸ್ ನಾಯಕನ ಸೋಗಿನಲ್ಲಿ ಒಬ್ಬಾತ ರಾಜ್ಯ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸ್ತೀನಿ ಎಂದು ಹೇಳ್ಕೊಂಡು ಹತ್ತಾರು ಮಂದಿಗೆ ಕೋಟ್ಯಂತರ ರೂಪಾಯಿ ಪೀಕಿಸಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.
ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬೆಂಗಳೂರಿನ ಸಿಸಿಬಿ ಪೊಲೀಸರು ಯುವರಾಜ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿ ಸುಧೀಂದ್ರ ರೆಡ್ಡಿ ಎಂಬವರಿಗೆ ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ನಂಬಿಸಿ, ಒಂದು ಕೋಟಿ ರೂಪಾಯಿ ಪಡೆದಿರುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸರು ಆತನ ಮನೆಗೆ ದಾಳಿ ನಡೆಸಿದಾಗ, 91 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ.


ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಾಗೂ ಸರಕಾರದಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡಿಸುವುದಾಗಿ ಈತ ಹತ್ತಾರು ಮಂದಿಗೆ ಮೋಸ ಮಾಡಿದ್ದಾನೆ. ಅಷ್ಟೇ ಅಲ್ಲ, ಅದಕ್ಕಾಗಿ ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡಿದ್ದಾನೆ. ಯುವರಾಜನ ಬಂಧನ ಆಗುತ್ತಿದ್ದಂತೆ ಪೊಲೀಸರಿಗೆ ಹಲವು ಕಡೆಗಳಿಂದ ಮೋಸ ಹೋಗಿರುವ ಮಂದಿ ದೂರು ಹೇಳಿಕೊಂಡಿದ್ದಾರೆ. ಎಲ್ಲರೂ ಬಂದು ದೂರು ದಾಖಲು ಮಾಡುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ರಾಜಕಾರಣಿಗಳು, ನಿವೃತ್ತ ಅಧಿಕಾರಿಗಳೇ ಹೀಗೆ ಮೋಸ ಹೋದವರು ಎನ್ನುವುದು ವಿಶೇಷ.



ರಾಜ್ಯಪಾಲರ ಹುದ್ದೆ, ನಿಗಮ ಮಂಡಳಿ ಹುದ್ದೆಗೆ ಇಂತಿಷ್ಟು ಅಂತ ಲೆಕ್ಕ ಹೇಳಿಕೊಂಡಿದ್ದ ಯುವರಾಜ, ಅದಕ್ಕಾಗಿ ಇಂತಿಷ್ಟು ಅಡ್ವಾನ್ಸ್ ಹಣ ಪಡೆಯುತ್ತಿದ್ದ. ರಾಜಧಾನಿಯಲ್ಲಿ ಹಲವಾರು ಮಂದಿಗೆ ಹಣ ಪಡೆದು ಮೋಸ ಮಾಡಿದ್ದಾನೆ. ರಾಜ್ಯಪಾಲರನ್ನಾಗಿ ಮಾಡುತ್ತೇನೆಂದು ವ್ಯಕ್ತಿಯೊಬ್ಬರಿಂದ ಹತ್ತು ಕೋಟಿ ಪಡೆದಿದ್ದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ಹೀಗೂ ಮೋಸ ಹೋಗುತ್ತಾರೆಯೇ ಎಂದು ಪೊಲೀಸರೇ ಹುಬ್ಬೇರಿಸಿದ್ದಾರೆ.
ಇನ್ನೂ ಹಲವರು ಈತನಿಂದ ಮೋಸ ಹೋಗಿರುವ ಸಾಧ್ಯತೆಯಿದ್ದು ನಗದು ಹಣ ಕೊಟ್ಟಿರುವುದು ಮತ್ತು ಮರ್ಯಾದೆಗೆ ಅಂಜಿ ದೂರು ಕೊಡಲು ಮುಂದೆ ಬರುತ್ತಿಲ್ಲ. ಬಿಜೆಪಿ ಸರಕಾರದಲ್ಲಿ ಆರೆಸ್ಸೆಸ್ ನಾಯಕರು ಕೈಯಾಡಿಸಿದ್ರೆ ಎಲ್ಲವೂ ಆಗುತ್ತೆ ಅನ್ನುವ ಭರವಸೆಯಿಂದ ಸಾಕಷ್ಟು ಹಣವಂತರೇ ಮೋಸಕ್ಕೆ ಒಳಗಾಗಿದ್ದಾರೆ, ಶ್ರೀಮಂತರು ತನ್ನನ್ನು ನಂಬುವಂತೆ ಮಾಡಲು ತಾನು ಸಿಎಂ ಯಡಿಯೂರಪ್ಪರಿಗೆ ಆಪ್ತ ಎನ್ನುವಂತೆ ಬಿಂಬಿಸಿ ಸಿಎಂ ಜೊತೆಗಿರುವ ಫೋಟೋ ತೋರಿಸಿಕೊಂಡು ಯಾಮಾರಿಸುತ್ತಿದ್ದ.
Fraud in the name of Giving Governor post one person has arrested by CCB police in Bangalore. The arrested has been identified as Yuvarj.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am