ಬ್ರೇಕಿಂಗ್ ನ್ಯೂಸ್
08-03-25 10:44 pm HK News Desk ಕ್ರೈಂ
ಕೊಪ್ಪಳ, ಮಾ.8 : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಡೆದ ವಿದೇಶಿ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲಕಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ತುಂಗಭದ್ರಾ ಎಡದಂಡೆ ಕಾಲುವೆ ಬಳಿ ತಡರಾತ್ರಿಯ ವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯೊಬ್ಬರ ಮೇಲೆ ಮೂರು ಜನರು ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಅಲ್ಲದೆ ಈ ವೇಳೆ ಸ್ಥಳದಲ್ಲಿದ್ದ ಇತರೆ ಮೂವರು ಪುರುಷರ ಮೇಲೂ ಹಲ್ಲೆ ಮಾಡಿ ಕಾಲುವೆಗೆ ತಳ್ಳಿದ್ದರು. ಈ ಪೈಕಿ ನಾಪತ್ತೆಯಾಗಿದ್ದ ಪ್ರವಾಸಿಯ ಶವ ಇಂದು ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒರಿಸ್ಸಾ ಮೂಲದ ಬೀಬಾಷಾ ಎಂದು ಗುರುತಿಸಲಾಗಿದೆ.

ಈ ಮಧ್ಯೆ, ಇಬ್ಬರು ಮಹಿಳಾ ಸಂತ್ರಸ್ತರು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಗಂಗಾವತಿ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22) ಮತ್ತು ಚೇತನ್ ಸಾಯಿ (21) ಬಂಧಿತರು. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಪೆಟ್ರೋಲ್ ಗೆ ಹಣ ಕೊಡಲಿಲ್ಲವೆಂದು ಅತ್ಯಾಚಾರ
ದುಷ್ಕರ್ಮಿಗಳು ಮದ್ಯ ಸೇವಿಸಿದ ನಂತರ ತಮ್ಮ ದ್ವಿಚಕ್ರ ವಾಹನದಲ್ಲಿ ಸುತ್ತುವ ಅಭ್ಯಾಸವನ್ನು ಹೊಂದಿದ್ದರು. ಇದೇ ರೀತಿ ಗುರುವಾರ ಸವಾರಿಯಲ್ಲಿದ್ದಾಗ ಪ್ರವಾಸಿಗರ ಗುಂಪನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೊದಲು ಅವರು ಪೆಟ್ರೋಲ್ ಬಂಕ್ ಕುರಿತು ವಿಚಾರಿಸಿದ್ದು, ಈ ವೇಳೆ ಪೆಟ್ರೋಲ್ ಗೆ ಹಣ ನೀಡು ಎಂದು ಕೇಳಿದ್ದಾರೆ. ಪ್ರವಾಸಿಗರು ಹಣ ನೀಡಲಿಲ್ಲ ಎಂದು ಜಗಳ ತೆಗೆದಿದ್ದಾರೆ. ಬಳಿಕ ಅಲ್ಲಿದ್ದ ಪುರುಷರನ್ನು ಹೊಡೆದು ಅವರನ್ನು ನಾಲೆಗೆ ತಳ್ಳಿದ್ದಾರೆ. ನಂತರ ಇಸ್ರೇಲಿ ಮೂಲದ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಾಲೆಗೆ ಬಿದ್ದ ಮೂವರು ಪುರುಷರ ಪೈಕಿ ಇಬ್ಬರು ಈಜಿ ಜೀವ ಉಳಿಸಿಕೊಂಡಿದ್ದರೆ, ಓರ್ವ ಒಡಿಶಾ ಮೂಲದ ಪ್ರವಾಸಿಗರು ಈಜಲು ಬಾರದೇ ಸಾವನ್ನಪ್ಪಿದ್ದಾನೆ.
Koppal police arrested two men on Saturday in connection with the gang-rape of a 27-year-old Israeli tourist and a 29-year-old homestay operator near Sanapur Lake, close to the Unesco World Heritage Site of Hampi.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm