ಬ್ರೇಕಿಂಗ್ ನ್ಯೂಸ್
16-03-25 07:27 pm Mangalore Correspondent ಕ್ರೈಂ
ಮಂಗಳೂರು, ಮಾ.15 : ರಾಜ್ಯದಲ್ಲೇ ಅತಿದೊಡ್ಡ ಮಟ್ಟದ ಡ್ರಗ್ಸ್ ಬೇಟೆಯಾಡಿರುವ ಮಂಗಳೂರು ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ.



ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕ ದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ.
ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದ ಪೊಲೀಸರ ಬಗ್ಗೆ ಪ್ರಶಂಸೆ ತೋರಿದ್ದಾರೆ.
ಮಂಗಳೂರು ಸಿಸಿಬಿ ಪೊಲೀಸರು ದೆಹಲಿಯಿಂದ ಬೆಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿದ್ದು ದಕ್ಷಿಣ ಆಫ್ರಿಕಾ ಮೂಲದ ಇಬ್ಬರು ಪ್ರಜೆಗಳನ್ನು ಬಂಧಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ… pic.twitter.com/dnsKNr7OS0
— CM of Karnataka (@CMofKarnataka) March 16, 2025
The Mangalore CCB police have executed the largest drug bust in the history of Karnataka, leading to a significant seizure of illegal substances worth 75 crores. Chief Minister Siddaramaiah took to social media to commend the police department for their relentless efforts in combating the drug menace that poses a serious threat to society
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm