ಬ್ರೇಕಿಂಗ್ ನ್ಯೂಸ್
17-03-25 07:51 pm Mangalore Correspondent ಕ್ರೈಂ
ಮಂಗಳೂರು, ಮಾ.17: ಮಂಗಳೂರು, ಪುತ್ತೂರು, ಕೇರಳದ ಕಾಸರಗೋಡು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪ್ರಕರಣ ಎದುರಿಸುತ್ತಿದ್ದ ಕಲಿ ಯೋಗೀಶನ ಸಹಚರನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು ಆತನ ಬಳಿಯಿದ್ದ ನಿಷೇಧಿತ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಸೀರ್ @ ಸದ್ದು @ ಸಾದು @ ಮಾಯ(32) ಬಂಧಿತ ವ್ಯಕ್ತಿ. ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅಬ್ದುಲ್ ಅಸೀರ್ ಮಾದಕ ವಸ್ತುಗಳೊಂದಿಗೆ ಕಾಸರಗೋಡಿನಿಂದ ಮಂಗಳೂರು ನಗರಕ್ಕೆ ಬಂದು ನಂತೂರು ಪರಿಸರದಲ್ಲಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂಬ ಖಚಿತ ಮಾಹಿತಿಯಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿ ವಶದಿಂದ ಸುಮಾರು 5 ಲಕ್ಷ ಮೌಲ್ಯದ 53 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಅಸೀರ್ ವಿದೇಶದಲ್ಲಿ ತಲೆಮರೆಸಿರುವ ಭೂಗತ ಪಾತಕಿ ಕಲಿ ಯೋಗೀಶನ ಸಹಚರನಾಗಿದ್ದು, ಈ ಹಿಂದೆ ಪುತ್ತೂರು ನಗರದಲ್ಲಿ ರಾಜಧಾನಿ ಜ್ಯುವೆಲರ್ಸ್ ಗೆ ಶೂಟೌಟ್ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ. ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದವನು ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಈ ಹಿಂದೆ ಕುಂಬಳೆ ಪೊಲೀಸ್ ಠಾಣೆಯಲ್ಲಿ ಶಾಫೀಕ್ ಕೊಲೆ ಪ್ರಕರಣ, ಪೋಕ್ಸೋ ಪ್ರಕರಣ, ಕಳ್ಳತನ ಪ್ರಕರಣ ಹಾಗೂ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ವಾಹನಕ್ಕೆ ಬೆಂಕಿ ಹಚ್ಚಿದ ಪ್ರಕರಣ ದಾಖಲಾಗಿದ್ದು, ವಾರಂಟ್ ಜಾರಿಯಲ್ಲಿರುತ್ತದೆ.
ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ, ಪಿಎಸ್ಐ ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ, ನರೇಂದ್ರ ಹಾಗೂ ಎಎಸ್ಐಗಳಾದ ಮೋಹನ್ ಕೆ.ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
Mangalore Underworld Associate of Gangster Kali Yogesh Arrested after Nine Years on the Run, Police Seize Drugs. The arrested has been identified as Mohammed Asheer Maya.
09-02-26 01:30 pm
HK News Desk
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
09-02-26 12:27 pm
HK News Desk
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
09-02-26 11:26 am
Mangalore Correspondent
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm