ಬ್ರೇಕಿಂಗ್ ನ್ಯೂಸ್
05-04-25 08:53 pm Bangalore Correspondent ಕ್ರೈಂ
ಬೆಂಗಳೂರು, ಏ 05: ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿರುವಂತಹ ಘಟನೆ ನಗರದ ಎಲೆಕ್ರ್ಟಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಗೇಪಲ್ಲಿ ಮೂಲದ ಶಾರದ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಕೃಷ್ಣ ಪತ್ನಿಯನ್ನು ಕೊಂದ ಪತಿ. ಅಕ್ರಮ ಸಂಬಂಧದ ಹಿನ್ನೆಲೆ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನಗರದ ದೊಡ್ಡ ತೋಗೂರು ಬಳಿಯ ಪ್ರಗತಿ ನಗರದಲ್ಲಿ ಈ ಘಟನೆ ನಡೆದಿದೆ.
ಪತ್ನಿ ಕೆಲಸ ಮುಗಿಸಿ ನಿರ್ಜನ ರಸ್ತೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪತಿ ದಾಳಿ ನಡೆಸಿದ್ದಾನೆ. ಪತ್ನಿಯನ್ನು ಕೊಲ್ಲಲು ಎರಡು ಚಾಕು ತಂದಿದ್ದ ಪತಿ ಆಕೆಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿ ಪತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಾರ ಫಾತಿಮಾ, ''ಸುಮಾರು 8:00 ಗಂಟೆ ಸಮಯದಲ್ಲಿ ನಮ್ಮ ಕಂಟ್ರೋಲ್ ರೂಮ್‌ಗೆ ಮಾಹಿತಿ ಬಂದಿತ್ತು. ನಮ್ಮ ಎಲೆಕ್ಟ್ರಾನಿಕ್ ಸಿಟಿ ಪಿಎಸ್ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದಾರೆ. ಕೂಡಲೇ ನಮ್ಮ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಯಾವ ವಿಚಾರಕ್ಕೆ ಕೊಲೆಯಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಎಲೆಕ್ಟ್ರಾನ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಂದ ನಂತರ ಸಂಪೂರ್ಣ ವಿಚಾರ ಗೊತ್ತಾಗಬೇಕಾಗಿದೆ'' ಎಂದಿದ್ದಾರೆ.
Tragic Incident in Bangalore, Husband Allegedly Kills Wife Over Suspected Affair in Broad Daylight". The deceased has been identified as Sharadha.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm