ಬ್ರೇಕಿಂಗ್ ನ್ಯೂಸ್
29-04-25 09:59 pm Mangalore Correspondent ಕ್ರೈಂ
ಮಂಗಳೂರು, ಎ.29 : ಮಂಗಳೂರಿನ ಕುಡುಪು ಬಳಿಯಲ್ಲಿ ನಡೆದ ವಲಸೆ ಕಾರ್ಮಿಕನ ಹತ್ಯೆ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು. ಘಟನೆಯ 48 ಗಂಟೆಗಳ ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಅಪೂರ್ಣ ಮಾಹಿತಿ ನೀಡಿದ್ದಾರೆ. 48 ಗಂಟೆಗಳ ಬಳಿಕ ಬಂಧನ ಪ್ರಕ್ರಿಯೆ ನಡೆಸಿದ್ದು ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ಆಡಳಿತ ಕಾಂಗ್ರೆಸ್ ಪಕ್ಷದ ನಾಯಕರೇ ಆಕ್ಷೇಪ ಎತ್ತಿದ್ದಾರೆ.
ಘಟನೆ ಹಿನ್ನಲೆಯಲ್ಲಿ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ ರೀತಿಯ ಕೃತ್ಯ ಆದರೂ ಯಾಕೆ ಪೊಲೀಸ್ ಇಲಾಖೆಗೆ ಗೊತ್ತಾಗಿಲ್ಲ. ಘಟನೆ ಬಗ್ಗೆ ನಿರ್ಲಕ್ಷ ವಹಿಸಿರುವ ಸ್ಥಳೀಯ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೂಡಲೇ ಅಮಾನತು ಪಡಿಸಬೇಕು ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಹುಲ್ ಹಮೀದ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಮಾದರಿಯ ಅಮಾನವೀಯ ಗುಂಪು ಹತ್ಯೆ ಆಗಿರೋದು ಇದೇ ಮೊದಲು. 20-30 ಮಂದಿ ಸೇರಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾರೆ. ಕ್ರಿಕೆಟ್ ಆಟದ ಸಂದರ್ಭ ವಲಸೆ ಕಾರ್ಮಿಕ ಅಲ್ಲಿ ಬಂದಿದ್ದು ಮಾತಿಗೆ ಮಾತು ಬೆಳೆದು ಆತನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಲಾಗಿದೆ.
ವಲಸೆ ಕಾರ್ಮಿಕನ ಮೃತದೇಹದ ಮೇಲೆ ಹಲವಾರು ಗಾಯದ ಗುರುತುಗಳಿದ್ದವು. ಆದರೆ ಪೊಲೀಸರಿಗೆ ದೇಹದ ಗಾಯದ ಗುರುತು ಸಂಶಯಕ್ಕೆ ಎಡೆ ಮಾಡಲಿಲ್ಲ ಎನ್ನುವುದು ಪ್ರಶ್ನಾರ್ಥಕ. ಇದಲ್ಲದೆ, ಪ್ರಕರಣದಲ್ಲಿ ಸ್ಥಳೀಯ ಕಾರ್ಪೊರೇಟರ್ ಒಬ್ಬರ ಪತಿಯೂ ಶಾಮೀಲಾಗಿದ್ದಾರೆ. ಹೀಗಾಗಿ ಬಿಜೆಪಿ ಮುಖಂಡರು, ಸ್ಥಳೀಯ ಶಾಸಕರು ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಘಟನೆಯ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಪೊಲೀಸರು ಸಂಗ್ರಹಿಸಬೇಕು. ಘಟನೆಯ ಪಾತ್ರಧಾರಿಗಳು ಮತ್ತು ಸೂತ್ರಧಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಟಿಯಲ್ಲಿ ಲಾರೆನ್ಸ್ ಡಿಸೋಜ, ಸುಹೈಲ್ ಕಂದಕ್, ಆಲ್ವಿನ್ ಪ್ರಕಾಶ್, ಮುಹಮ್ಮದ್ ಬಪ್ಪಲಿಗೆ, ವಹಾಬ್ ಕುದ್ರೋಳಿ, ಹಬೀಬ್ ಕಣ್ಣೂರ್, ಬಶೀರ್ ಕಣ್ಣೂರ್, ಜಾರ್ಜ್ ಟಿ.ವಿ ಉಪಸ್ಥಿತರಿದ್ದರು.
A gruesome act of mob violence has sent shockwaves through the region, raising serious questions about the effectiveness of both the intelligence network and the local police force. In what is now being called the “Mudupi Mob Murder Case,” a group of individuals brutally lynched a man (or more, depending on the case details) in broad daylight, while authorities seemingly remained oblivious to the mounting tensions that led to the tragedy.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 04:31 pm
Mangalore Correspondent
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm