ಬ್ರೇಕಿಂಗ್ ನ್ಯೂಸ್
20-12-20 01:20 pm Mantesh, Hubli Reporter ಕ್ರೈಂ
ಹುಬ್ಬಳ್ಳಿ, ಡಿ.20: ಎಸಿಪಿ ದರ್ಜೆಯ ಅಧಿಕಾರಿಯೊಬ್ಬರು ತಮ್ಮ ಠಾಣೆಯ ಪೊಲೀಸ್ ಪೇದೆಗೆ ಕಪಾಳ ಮೋಕ್ಷ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ - ಧಾರವಾಡ ಸಂಚಾರಿ ವಿಭಾಗದ ಎಸಿಪಿ ಹೊಸಮನಿ, ಪೊಲೀಸ್ ಪೇದೆ ಗುರುನಾಥ ಜಗಾಪೂರ ಎಂಬವರಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎರಡು ದಿನಗಳ ಹಿಂದೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಠಾಣೆಯೊಳಗೆ ನಡೆದಿರುವ ಕೃತ್ಯದ ಸಿಸಿಟಿವಿ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ. ಠಾಣೆಯ ಪೊಲೀಸರೇ ಈ ವಿಡಿಯೋ ತೆಗೆದು ವೈರಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.

ಅಕ್ರಮ ಮರಳು ವ್ಯವಹಾರದ ವಿಚಾರದಲ್ಲಿ ಅಸಮಾಧಾನಗೊಂಡ ಎಸಿಪಿ ಸಾಹೇಬ್ರು ಪೇದೆ ಮೇಲೆ ಕೈಮಾಡಿದ್ದಾರೆ ಎನ್ನಲಾಗಿದೆ. ಹುಬ್ಬಳ್ಳಿಗೆ ಹೊಸ ಪೊಲೀಸ್ ಆಯುಕ್ತರಾಗಿ ಲಾಬೂರಾಮ್ ಬಂದ ಮೇಲೆ ಬಹುತೇಕ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಬಿದ್ದಿತ್ತು. ಹೀಗಾಗಿ ಆಯಕಟ್ಟಿನ ಜಾಗಗಳಿಗೆ ಸಂದಾಯ ಆಗುತ್ತಿದ್ದ ಮಾಮೂಲಿಗಳು ಬರುತ್ತಿರಲಿಲ್ಲ ಎನ್ನಲಾಗಿದೆ. ಇದೇ ವಿಚಾರದಲ್ಲಿ ಎಸಿಪಿ ಸಾಹೇಬ್ರು ಪೇದೆಯನ್ನು ಠಾಣೆಗೆ ಕರೆಸಿಕೊಂಡು ಕಪಾಳಕ್ಕೆ ಬಾರಿಸಿದ್ದಾರೆ ಎನ್ನಲಾಗಿದೆ.
ಆದರೆ, ಪೊಲೀಸ್ ಅಧಿಕಾರಿ ಯಾವುದೋ ಆಕ್ರೋಶವನ್ನು ಮುಗ್ದ ಪೊಲೀಸ್ ಪೇದೆಯ ಮೇಲೆ ತೀರಿಸಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಠಾಣೆಯಲ್ಲೇ ಪೇದೆಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸಿಪಿ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ ಎಂದು ಜನರು ಟೀಕಿಸುತ್ತಿದ್ದಾರೆ. ಅಲ್ಲದೆ, ಹಿರಿಯಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸುತ್ತಿದ್ದಾರೆ.
Live Video:
A video of Hubli Acp Hosmani slapping a police constable in the police station has gone viral on social media revealing the ugly face of the top cop.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm