ಬ್ರೇಕಿಂಗ್ ನ್ಯೂಸ್
15-05-25 11:06 pm HK News Desk ಕ್ರೈಂ
ದಾವಣಗೆರೆ, ಮೇ 14 : ಗೋಲ್ಡ್ ಲೋನ್ ಆಫೀಸರ್ ಒಬ್ಬ ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ಗೇ ಕನ್ನ ಹಾಕಿ, ಕೆಜಿಗಟ್ಟಲೆ ಚಿನ್ನಾಭರಣಗಳನ್ನು ಕದ್ದು ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿರುವಂತಹ ಘಟನೆ ಬೆಳಕಿಗೆ ಬಂದಿದೆ.
ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ಎಂಬಾತ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.
ಕೆಲಸ ಮಾಡುತ್ತಿದ್ದ ಬ್ಯಾಂಕ್ನಿಂದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಚಿನ್ನಾಭರಣವನ್ನು ಕದ್ದು, ಬೇರೊಂದು ಬ್ಯಾಂಕ್ನಲ್ಲಿ ಅಡವಿಟ್ಟಿದ್ದ.
ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ತಕ್ಷಣ ಮ್ಯಾನೇಜರ್ ಈ ಬಗ್ಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ. ಆತ ಅಡವಿಟ್ಟಿದ್ದ ಒಟ್ಟು 2.61 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವರದಿಗಳ ಪ್ರಕಾರ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಡುತ್ತಿದ್ದ. ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ಆತ ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್ನಲ್ಲೇ ಕಳೆದಿದ್ದಾನೆ ಎಂದು ತಿಳಿದು ಬಂದಿದೆ.
Addicted to Online Gaming, SBI Staff Steals Gold from Bank and Pledges it Elsewhere; 2.61 Crore Worth gold Seized, Accused Nabbed. The arrested has been identified as Devraj.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm