ಬ್ರೇಕಿಂಗ್ ನ್ಯೂಸ್
29-05-25 06:38 pm Mangaluru Correspondent ಕ್ರೈಂ
ಮಂಗಳೂರು, ಮೇ 29: ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಪ್ರಕಟಣೆ ಹೊರಡಿಸಿದ್ದು, ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಮುಂಡರಕೋಡಿಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಪೃಥ್ವಿರಾಜ್ (21), ಅಮ್ಮುಂಜೆ ಗ್ರಾಮದ ಶಿವಾಜಿನಗರದ ಚಿಂತನ್ (19) ಅವರನ್ನು ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ತಿಳಿಸಿದ್ದಾರೆ.
ಬಂಟ್ವಾಳ ಪೊಲೀಸ್ ಉಪಾಧೀಕ್ಷಕ ವಿಜಯಪ್ರಸಾದ್ ತನಿಖಾಧಿಕಾರಿಯಾಗಿದ್ದು, ಇವರ ನೇತೃತ್ವದಲ್ಲಿ ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ಕಾರ್ಯ ನಡೆಸಲಾಗಿದೆ. ತನಿಖಾ ತಂಡವು ಮೇ 29ರಂದು ಬಂಟ್ವಾಳ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೀಪಕ್, ಸುಮಿತ್ ಮತ್ತು 15 ಮಂದಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಬ್ದುಲ್ ರಹಿಮಾನ್ ಬೆಂಜನಪದವು ಬಳಿಯ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದಾಗ ಎರಡು ಸ್ಕೂಟರ್ ನಲ್ಲಿ ಬಂದಿದ್ದವರು ತಲವಾರು ದಾಳಿ ನಡೆಸಿದ್ದರು. ಅಬ್ದುಲ್ ರಹಿಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ ಜೊತೆಗಿದ್ದ ಕಲಂದರ್ ಶಾಫಿ ಎಂಬಾತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ.
ಆರೋಪಿಗಳು ಪರಿಚಿತರೇ ಆಗಿದ್ದು ಹಳೆ ದ್ವೇಷವೇ ಅಥವಾ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರಕ್ಕಾಗಿ ಕೊಲೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇತರ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore Bantwal Abdul Rahiman Murder Case, Police Confirm Arrest of Three Accused
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm