ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.
ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 02:42 pm
Mangalore Correspondent
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm