ಬ್ರೇಕಿಂಗ್ ನ್ಯೂಸ್
03-06-25 01:33 pm HK News Desk ಕ್ರೈಂ
ವಿಜಯಪುರ, ಮೇ 03 : ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿದೆ. ಕಳೆದ ಮೇ 24 ರಂದು ರಾತ್ರಿ ಬ್ಯಾಂಕ್ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಅಂದ್ರೆ 58 ಕೋಟಿ ರೂ. ಬೆಳೆಬಾಳುವ ಚಿನ್ನ, ಹಾಗೂ 5.20 ಲಕ್ಷ ನಗದನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ಮಾತನಾಡಿದ್ದು, 'ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕಿನ ಮ್ಯಾನೇಜರ್ ಠಾಣೆಗೆ ಬಂದು ಕಂಪ್ಲೇಂಟ್ ಕೊಟ್ಟಿದ್ದಾರೆ. 23-5-2025ರಂದು ಬ್ಯಾಂಕ್ ಲಾಕ್ ಮಾಡಿ ಸಿಬ್ಬಂದಿ ಹೋಗಿದ್ದರು. 25 ನೇ ತಾರೀಖು ಅವರ ಸಿಬ್ಬಂದಿ ಸ್ವಚ್ಛತೆಗೆ ಎಂದು ಬಂದಾಗ ಶಟರ್ಸ್ ಲಾಕ್ ಕಟ್ ಆಗಿರುವುದು ಗಮನಕ್ಕೆ ಬಂದಿದೆ. ನಂತರ ಪೊಲೀಸ್ ಇಲಾಖೆಗೆ ಮಾಹಿತಿಯನ್ನು ಕೊಟ್ಟಿದ್ದಾರೆ. ನಂತರ ಇದನ್ನು ಪರಿಶೀಲಿಸಿದಾಗ ಬ್ಯಾಂಕ್ಗೆ ಕಳ್ಳರು ಬಂದು ಕದ್ದಿರುವುದು ಗಮನಕ್ಕೆ ಬಂದಿದೆ. ಜನರು ಲೋನ್ಗಾಗಿ ಬಂಗಾರವನ್ನು ಅಡವಿಟ್ಟು ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ . ಪ್ರಕರಣದ ತನಿಖೆಗೆ 8 ತಂಡಗಳನ್ನು ರಚಿಸಿದ್ದೇವೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ತರಲಾಗುವುದು' ಎಂದು ಹೇಳಿದ್ದಾರೆ.
ಬ್ಯಾಂಕ್ ಅಧಿಕಾರಿಗಳು ಲೂಟಿ ಮಾಡಿದ ಸೊತ್ತನ್ನು ಮೌಲ್ಯಮಾಪನ ಮಾಡಿದಾಗ 59 ಕೆಜಿ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಕಂಡುಬಂದಿದೆ. ಇದರ ಮೌಲ್ಯ 53 ಕೋಟಿ ಎಂದು ಅಂದಾಜಿಸಲಾಗಿದೆ.
ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ;
ಕಳ್ಳತನ ಮಾಡಿದ ಆರೋಪಿಗಳು ತನಿಖೆಯ ದಿಕ್ಕು ತಪ್ಪಿಸಲು, ಬ್ಯಾಂಕ್ ಪ್ರವೇಶ ದ್ವಾರದ ಕೀ ಮುರಿದು ಒಳಗೆ ಹೋಗಿ ಕಳ್ಳತನ ಮಾಡಿದ್ದಾರೆ. ನಂತರ ಬ್ಯಾಂಕ್ ಕಿಟಕಿಯ ಸರಳುಗಳನ್ನು ಒಳಗಿನಿಂದಲೇ ಕಟ್ ಮಾಡಿ ಕಿಟಕಿ ಸರಳು ಕಟ್ ಮಾಡಿ ಒಳಗೆ ನುಗ್ಗಿದ್ದಾರೆ ಎಂಬಂತೆ ಬಿಂಬಿಸಿದ್ದಾರೆ. ಅಲ್ಲದೆ, ಬ್ಯಾಂಕ್ ಒಳಗೆ ವಾಮಾಚಾರವಾಗಿದೆ ಎಂದು ಬಿಂಬಿಸಲು ಕಪ್ಪು ಬಟ್ಟೆಯ ಬೊಂಬೆ ಇಟ್ಟು ಪೂಜೆ ಮಾಡಿದ್ದಾರೆ ಎಂಬುವುದು ಕೂಡ ತನಿಖೆಯ ಗಮನ ಬೇರೆಡೆ ಸೆಳೆಯಲು ಎಂದು ಎಂಬುದು ತಿಳಿದುಬಂದಿದೆ.
ಮನಗೂಳಿ ಪಟ್ಟಣ ನಿವಾಸಿ ಶಿವನಗೊಂಡ ಅವರು ಮಾತನಾಡಿದ್ದು, 'ಬ್ಯಾಂಕ್ನಲ್ಲಿ ಚಿನ್ನ ಹಾಗೂ ಹಣ ಕಳ್ಳತನವಾಗಿರುವ ಬಗ್ಗೆ ಗ್ರಾಹಕರು ಮನನೊಂದಿದ್ದಾರೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಿ. ಬ್ಯಾಂಕ್ನವರು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಆದಷ್ಟು ಬೇಗ ಇದಕ್ಕೆ ಪರಿಹಾರ ಕಲ್ಪಿಸಿಕೊಡಬೇಕು' ಎಂದು ವಿನಂತಿಸಿಕೊಂಡಿದ್ದಾರೆ.
Thieves decamped with 59 kg of gold jewelry worth Rs 53 crore from the Canara Bank in Karnataka. The theft was from the Mangoli branch of Canara Bank in Vijayapura. The incident is reported to have happened on May 23. This is one of the biggest bank robberies in the country.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm