ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

Kundapura News, Assault, crime: ಚಿಲ್ಲರೆ ಕೇಳಿದ ಮೆಡಿಕಲ್ ಸಿಬಂದಿ ಯುವತಿಗೆ ಹಲ್ಲೆಗೈದ ಮಹಿಳೆ ; ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿತ ಮಹಿಳೆ ಬಂಧನ 

10-06-25 10:57 pm       Udupi Correspondent   ಕ್ರೈಂ

ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ. 

ಕುಂದಾಪುರ, ಜೂನ್ 10 : ಚಿಲ್ಲರೆ ವಿಚಾರಕ್ಕೆ ಮೆಡಿಕಲ್ ಶಾಪ್ ಸಿಬ್ಬಂದಿ ಯುವತಿಗೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿತ ಮಹಿಳೆಯನ್ನು ಬಂಧಿಸಿದ್ದಾರೆ. 

ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ಸಿಬ್ಬಂದಿ ಲಕ್ಷ್ಮೀ ಎಂಬ ಯುವತಿಗೆ ಯಾಸ್ಮಿನ್ ಎಂಬ ಮಹಿಳೆ ಚಿಲ್ಲರೆ ವಿಚಾರಕ್ಕೆ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಹಲ್ಲೆ ನಡೆಸಿದ ಯಾಸ್ಮಿನ್ ಎಂಬ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ. 

ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದಿದ್ದ ಯಾಸ್ಮಿನ್, ಔಷಧ ಖರೀದಿಸಿ 500 ರೂ. ಕೊಟ್ಟಿದ್ದಳು. ಇದಕ್ಕೆ ಚಿಲ್ಲರೆ ಇಲ್ಲ, ಚಿಲ್ಲರೆ ಕೊಡಿ ಎಂದ ಯುವತಿ ಕೇಳಿದ್ದಾಳೆ. ಆದರೆ ಯಾಸ್ಮಿನ್‌ ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆಸಿ ಯುವತಿ ಮೇಲೆ ಹಲ್ಲೆ ನಡೆಸಿ, ಅವಾಚ್ಯವಾಗಿ ಜಾತಿ ನಿಂದನೆ ನಡೆಸಿದ್ದಾಳೆ ಎಂದು ದೂರಲಾಗಿದೆ. ಹಲ್ಲೆಗೀಡಾದ ಲಕ್ಷ್ಮೀ ಕುಂದಾಪುರದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. 

ಘಟನೆ ಸಂಬಂಧಿಸಿ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಅ.ಕೃ 34/2025,ಕಲಂ 352,115(2) BNS, 3(1)(r), 3(2)(va) SC/ST Act ರಂತೆ ಪ್ರಕರಣ ದಾಖಲಾಗಿದೆ. ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಎಸ್ಪಿ ಹರಿರಾಮ್ ಶಂಕರ್, ಸಂತ್ರಸ್ತ ಮಹಿಳೆಯನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.

A woman has been arrested in Kundapura after a video showing her assaulting a young female staff member at a medical shop over a change-related argument went viral on social media. The incident took place at a pharmacy in Mavinakatte, located in Gulvadi village.