ಬ್ರೇಕಿಂಗ್ ನ್ಯೂಸ್
11-06-25 02:03 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 11 : ಅಡಿಕೆ ಖರೀದಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿಯೊಬ್ಬ ಬಂಟ್ವಾಳ ಆಸುಪಾಸಿನ 50ಕ್ಕು ಹೆಚ್ಚು ರೈತರಿಂದ ಅಡಿಕೆ ಖರೀದಿಸಿ ಹಣ ಕೊಡದೆ ಕೋಟ್ಯಾಂತರ ರೂಪಾಯಿ ಮೋಸ ಮಾಡಿ ಪರಾರಿಯಾಗಿದ್ದು ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿ ಎ.ಬಿ. ಸುಪಾರಿ ಎಂಬ ಅಂಗಡಿ ಹೊಂದಿರುವ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್ ಮಹಮ್ಮದ್ ಪರಾರಿಯಾದ ಆರೋಪಿ. 50ಕ್ಕೂ ಅಧಿಕ ಅಡಿಕೆ ಬೆಳೆಗಾರರಿಗೆ ಮೋಸ ಮಾಡಿದ್ದು, ರೈತರು ಬಂಟ್ವಾಳ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರವೀಣ್ ಡಿ ಸೋಜಾ (45) ಎಂಬವರು ದೂರು ದಾಖಲಿಸಿದ್ದು ಕಳೆದ ಮಾರ್ಚ್ 8 ರಂದು ನೌಫಲ್ ಮಹಮ್ಮದ್ ಅವರ ಎ.ಬಿ ಸುಪಾರಿ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್ ಅಡಿಕೆಯನ್ನು ಮಾರಾಟ ಮಾಡಿದ್ದು ಅದರ ಮೌಲ್ಯ 3.50 ಲಕ್ಷ ಹಣವನ್ನು ಕೊಟ್ಟಿರಲಿಲ್ಲ. ಹಿಂದಿನಿಂದಲೂ ಅಡಿಕೆ ಕೊಡುತ್ತಿದ್ದುದರಿಂದ ಆಮೇಲೆ ಹಣ ಕೊಡುವುದಾಗಿ ವ್ಯಾಪಾರಿ ಹೇಳಿದ್ದ.
ಪ್ರವೀಣ್ ಡಿಸೋಜಾ ಆನಂತರ ಹಣವನ್ನು ನೀಡುವಂತೆ ಕೇಳತೊಡಗಿದ್ದರು. ಜೂನ್ 9ರಂದು ರಾತ್ರಿ ಆರೋಪಿ ನೌಫಾಲ್ ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್ ಮಾಡಿದ್ದ. ಇದರಿಂದ ಗಾಬರಿಗೊಂಡ ಪ್ರವೀಣ್, ಮರು ದಿನವೇ ಬೆಳಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಇದೇ ವೇಳೆ, ವ್ಯಾಪಾರಿ ನೌಫಾಲ್ ಜೊತೆಗೆ ಅಡಿಕೆ ವ್ಯಾಪಾರ ಮಾಡಿ, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಅಂಗಡಿ ಮುಂದೆ ಸೇರಿದ್ದರು.
ಆರೋಪಿ ನೌಫಾಲ್ ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು ರೂ. 94,77,810 /- ನ್ನು ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರವೀಣ್ ಡಿಸೋಜ ದೂರಿನಂತೆ, ಅಕ್ರ: 64/2025 ಕಲಂ: 316(2) 318(4) ಬಿಎನ್ಎಸ್ -2023 ರಂತೆ ಪ್ರಕರಣ ದಾಖಲಾಗಿದೆ.
ನೌಫಾಲ್ ಮಹಮ್ಮದ್ ಹಲವಾರು ವರ್ಷಗಳಿಂದ ಅಡಿಕೆ ವ್ಯಾಪಾರ ಮಾಡಿಕೊಂಡಿದ್ದು ಆಸುಪಾಸಿನ ಕೃಷಿಕರ ವಿಶ್ವಾಸ ಗಳಿಸಿದ್ದ. ಹಣ ಬಾಕಿ ಇರಿಸಿದ್ದರೆ, ಚೀಟಿಯಲ್ಲಿ ಬರೆದು ಕೊಡುತ್ತಿದ್ದ. ಕೇವಲ ವಿಶ್ವಾಸದಿಂದಲೇ ಅಡಿಕೆ ವ್ಯವಹಾರ ನಡೆಯುತ್ತಿತ್ತು. ವ್ಯಾಪಾರಿಯೇ ಸಾಕಷ್ಟು ಕೃಷಿಕರ ಮನೆಗೆ ತೆರಳಿ ಅಡಿಕೆಯನ್ನು ತನ್ನ ವಾಹನದಲ್ಲಿ ತುಂಬಿಸಿ ತರುತ್ತಿದ್ದ. ಆದರೆ ಕೆಲವು ಸಮಯಗಳಿಂದ ಹೀಗೆ ತಂದಿದ್ದ ಅಡಿಕೆಗೆ ಪ್ರತಿಯಾಗಿ ಹಣವನ್ನು ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಕೆಲವರಿಗೆ 30 ಲಕ್ಷಕ್ಕೂ ಹೆಚ್ಚಿನ ಮತ್ತು ಇನ್ನು ಕೆಲವರಿಗೆ 50 ಸಾವಿರ ರೂ.ಗಳಷ್ಟು ವಂಚಿಸಿದ್ದಾನೆ ಎಂದು ತಿಳಿದುಬಂದಿದೆ.
Mangalore Arecanut Trader Cheats Over 50 Farmers of Crores, Shop Locked, Accused Absconds After Massive Fraud in Bantwal.
19-09-25 09:45 am
Bangalore Correspondent
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
18-09-25 08:14 pm
HK News Desk
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
18-09-25 11:11 pm
Mangalore Correspondent
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
Ajith Kumar Rai, Mangalore: ಬಂಟ- ನಾಡವರು ಒಂದೇ,...
18-09-25 06:11 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm