ಬ್ರೇಕಿಂಗ್ ನ್ಯೂಸ್
23-06-25 11:47 am Udupi Correspondent ಕ್ರೈಂ
ಉಡುಪಿ, ಜೂನ್ 23 : ಮಗನೇ ತನ್ನ ತಾಯಿಯನ್ನು ಕತ್ತು ಹಿಸುಕಿ ಕೊಲೆಗೈದು ನಾಟಕವಾಡಿದ್ದ ಕೃತ್ಯ ಮಣಿಪಾಲದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದ್ದು ಮಗನೇ ಕತ್ತು ಹಿಸುಕಿ ಕೊಲೆಗೈದ ಕೃತ್ಯವೆಂದು ಪತ್ತೆಯಾಗಿದೆ.
ಕೊಲೆಗೀಡಾದವರು ಮಣಿಪಾಲ ನಿವಾಸಿ ಪದ್ಮಾಬಾಯಿ (45) ಎಂಬವರಾಗಿದ್ದು ಮೃತರ ಪುತ್ರ ಈಶ ನಾಯ್ಕ್ (26) ನನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 18ರಂದು ರಾತ್ರಿ ಪದ್ಮಾಬಾಯಿ ಅವರನ್ನು ಸೊಂಟ ನೋವೆಂದು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದು ರಾತ್ರಿ ಪದ್ಮಾಬಾಯಿ ಅವರ ತಂಗಿ ಶಿಲ್ಪಾ ಅವರಿಗೆ ಕರೆ ಮಾಡಿದ್ದ ಈಶ ನಾಯ್ಕ್, ತಾಯಿಗೆ ಉಷಾರಿಲ್ಲ, ಆಸ್ಪತ್ರೆಗೆ ಕರೆದುಕೊಂಡು ಹೋಗಲು ಹಣ ಕಳುಹಿಸುವಂತೆ ತಿಳಿಸಿದ್ದ. ಅದರಂತೆ ಶಿಲ್ಪಾ ಆನ್‌ಲೈನಲ್ಲಿ ಹಣ ಕಳುಹಿಸಿದ್ದರು.
ಮರುದಿನ ಬೆಳಗ್ಗೆ ಚಿಕ್ಕಮ್ಮ ಶಿಲ್ಪಾಗೆ ಕರೆ ಮಾಡಿದ ಈಶ ನಾಯ್ಕ್ ತಾಯಿ ಮೃತಪಟ್ಟಿರುವುದಾಗಿ ತಿಳಿಸಿದ್ದ. ಶಿಲ್ಪಾ ಬಳಿಕ ಆಸ್ಪತ್ರೆಗೆ ಬಂದು ನೋಡಿದಾಗ ಪದ್ಮಬಾಯಿ ಅವರ ಕುತ್ತಿಗೆ ಬಳಿ ಗಾಯದ ಗುರುತುಗಳಿದ್ದವು. ಹೀಗಾಗಿ ಸಾವಿನಲ್ಲಿ ಸಂಶಯ ಇರುವುದಾಗಿ ಶಿಲ್ಪಾ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಣಿಪಾಲ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು ಪದ್ಮಾಬಾಯಿ ಅವರನ್ನು ಜೂನ್ 18ರಂದು ರಾತ್ರಿಯಿಂದ ಜೂನ್ 19ರ ಬೆಳಗಿನ ನಡುವೆ ಯಾರೋ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಕಂಡುಬಂದಿತ್ತು. ಅದರಂತೆ ಮಣಿಪಾಲ ಪೊಲೀಸರು ಕೊಲೆ ಪ್ರಕರಣವೆಂದು ಪರಿಗಣಿಸಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಈಶ ನಾಯ್ಕ್ ನನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಮಗನೇ ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ತಾಯಿಯನ್ನು ಕೊಲೆ ಮಾಡಿರುವುದಾಗಿ ಪತ್ತೆಯಾಗಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.
A shocking incident has come to light in Manipal where a man staged a drama after allegedly murdering his own mother by strangulation. The crime, initially masked as a medical emergency, was uncovered following a postmortem examination that confirmed foul play. The deceased has been identified as Padmabai (45), a resident of Manipal. Her son, Eesh Nayak (26), has been arrested by the Manipal police in connection with the murder.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm