ಬ್ರೇಕಿಂಗ್ ನ್ಯೂಸ್
29-06-25 02:26 pm HK News Desk ಕ್ರೈಂ
ತುಮಕೂರು, ಜೂನ್ 29 : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕಣ್ಣಿಗೆ ಖಾರದ ಪುಡಿ ಎರಚಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಕಟ್ಟಿಸಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತಿಪಟೂರು ತಾಲೂಕಿನ 50 ವರ್ಷದ ಶಂಕರಮೂರ್ತಿ ಎಂಬವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಕಾಡುಶೆಟ್ಟಿಹಳ್ಳಿಯಲ್ಲಿ ಜೂನ್ 24 ರಂದು ಈ ಕೊಲೆ ನಡೆದಿದೆ. ಕೊಲೆಯ ನಂತರ ಶವವನ್ನು ಗೋಣಿಚೀಲದಲ್ಲಿ ತುಂಬಿ ಸುಮಾರು 30 ಕಿಮೀ ಸಾಗಿಸಿ, ತುರುವೇಕೆರೆ ತಾಲೂಕಿನ ದಂಡನಶಿವರ ಪೊಲೀಸ್ ಠಾಣಾ ವ್ಯಾಪ್ತಿಯ ತೋಟದ ಬಾವಿಯೊಂದಕ್ಕೆ ಎಸೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನೊಣವಿನಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸುಮಂಗಳಾ ತಿಪಟೂರು ನಗರದ ಕಲ್ಪತರು ಕಾಲೇಜಿನ ಗರ್ಲ್ಸ್ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಇದೇ ವೇಳೆ, ಕರಡಾಳು ಸಂತೆ ಗ್ರಾಮದ ನಾಗರಾಜು ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಳು. ಇವರ ಸಂಬಂಧಕ್ಕೆ ಪತಿ ಶಂಕರಮೂರ್ತಿ ಅಡ್ಡಿಯಾಗಿದ್ದ. ಈ ಕಾರಣಕ್ಕಾಗಿ, ಸುಮಂಗಲಾ ಮತ್ತು ನಾಗರಾಜು ಸೇರಿ ಶಂಕರಮೂರ್ತಿ ಕೊಲೆಗೆ ಯೋಜನೆ ರೂಪಿಸಿದ್ದರು.
ಜೂನ್ 24 ರಂದು ಶಂಕರಮೂರ್ತಿ ತೋಟದ ಮನೆಯಲ್ಲಿ ಒಬ್ಬಂಟಿ ಮಲಗಿದ್ದಾಗ ಸುಮಂಗಲಾ ಮತ್ತು ನಾಗರಾಜು ಆತನ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ಗೋಣಿಚೀಲದಲ್ಲಿ ತುಂಬಿ, ಸುಮಾರು 30 ಕಿಮೀ ದೂರದ ತುರುವೇಕೆರೆ ಎಂಬಲ್ಲಿಗೆ ಒಯ್ದು ತೋಟದ ಬಾವಿಗೆ ಎಸೆದಿದ್ದಾರೆ. ಕೃತ್ಯದ ನಂತರ, ಆರೋಪಿಗಳು ಯಾವುದೇ ಶಂಕೆಗೆ ಒಳಗಾಗದಂತೆ ಗ್ರಾಮಕ್ಕೆ ಹಿಂದಿರುಗಿದ್ದರು.
ನೊಣವಿನಕೆರೆ ಪೊಲೀಸರು ತನಿಖೆ ಆರಂಭಿಸಿದ್ದು, ಅಕ್ರಮ ಸಂಬಂಧ ಮಾಹಿತಿ ಆಧರಿಸಿ ಸುಮಂಗಳಾಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಶವವನ್ನು ತೋಟದ ಬಾವಿಯಿಂದ ತೆಗೆಯಲಾಗಿದೆ. ತಿಪಟೂರಿನಲ್ಲಿ ಈ ಘಟನೆ ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.
A man was found dead under suspicious circumstances in Kadushetti Halli, a village near Nonavinakere in Tipatur taluk, Tumakuru district. The incident, which occurred on June 24, has led to the detention of the man's wife and one other individual for questioning. The deceased has been identified as 50-year-old Shankaramoorthy, a resident of the village
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 07:52 pm
HK News Staffer
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm