ಬ್ರೇಕಿಂಗ್ ನ್ಯೂಸ್
03-07-25 07:09 pm HK News Desk ಕ್ರೈಂ
ಜೈಪುರ, ಜು.03: ಅದ್ಧೂರಿಯಾಗಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ ಪರಿಣಾಮ ಮಂಟಪದಿಂದಲೇ ವರ ಓಡಿಹೋಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ರಾಜಸ್ಥಾನದ ಪ್ರಸಿದ್ಧ ಫೇರ್‌ಮಾಂಟ್ ಹೋಟೆಲ್‌ನಲ್ಲಿ ಅದ್ಧೂರಿ ವಿವಾಹ ನಡೆಯುತ್ತಿತ್ತು. ಇದು ಸೌರಭ್ ಅಹುಜಾ ಎಂಬವನ ಅದ್ದೂರಿ ವಿವಾಹವಾಗಿತ್ತು. ಈ ಸೌರಭ್ ಅಹುಜಾ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣದ ಮುಖ್ಯ ಆರೋಪಿಯಾಗಿದ್ದಾನೆ.
15,000 ಕೋಟಿ ರೂಪಾಯಿಗಳ ಮಹಾದೇವ್ ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿತ್ತು. ಸೌರಭ್ ಅಹುಜಾ ಪ್ರಕರಣದಲ್ಲಿ ಮೋಸ್ಟ್ ವಾಂಟೆಡ್ ಆಗಿದ್ದಾನೆ.
ಮದುವೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಇ.ಡಿ ಅಧಿಕಾರಿಗಳು ಮಂಟಪಕ್ಕೆ ದಾಳಿ ಮಾಡಿದ್ದಾರೆ. ಆದರೆ 'ಸಪ್ತಪದಿ' ತುಳಿಯುವ ಮುನ್ನ ಇ.ಡಿ ತನ್ನ ಬಂಧನಕ್ಕೆ ಬರುತ್ತಿರುವ ಬಗ್ಗೆ ಅರಿತ ಸೌರಭ್ ಮಂಟಪದಿಂದಲೇ ಪರಾರಿ ಆಗಿದ್ದಾನೆ.
ಮಂಟಪಕ್ಕೆ ಸೌರಭ್ ಬಂಧನಕ್ಕೆ ಬಂದಿದ್ದ ಅಧಿಕಾರಿಗಳು, ಹಗರಣಕ್ಕೆ ಸಂಬಂಧಿಸಿ ಪ್ರಣವೇಂದ್ರ ಮತ್ತು ಇತರ ಇಬ್ಬರನ್ನು ಬಂಧಿಸಿದ್ದಾರೆ. ಇದಲ್ಲದೆ ಸೌರಭ್ ಎಲ್ಲಿದ್ದಾನೆ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಲು ವಧು, ಅವರ ಕುಟುಂಬ ಸದಸ್ಯರು ಮತ್ತು ಇತರ ನಿಕಟ ಸಂಬಂಧಿಗಳನ್ನು ಪ್ರಶ್ನಿಸಿದ್ದಾರೆ.
ಜೈಪುರಕ್ಕೆ ಬಂದಿದ್ದ ಇ.ಡಿ:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಸ್ವಲ್ಪ ಸಮಯದಿಂದ ಸೌರಬ್‌ನನ್ನು ಟ್ರ್ಯಾಕ್ ಮಾಡುತ್ತಿತ್ತು. ಮದುವೆ ವೇಳೆಯೇ ಅವನನ್ನು ಬಂಧಿಸುವ ನಿಟ್ಟಿನಲ್ಲಿ ರಾಯ್‌ಪುರದಿಂದ ಜೈಪುರಕ್ಕೆ ಒಂದು ತಂಡವನ್ನು ಕಳುಹಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಮಹಾದೇವ್ ಬೆಟ್ಟಿಂಗ್ ಆ್ಯಪ್ ದೇಶದೆಲ್ಲೆಡೆ ಸಂಚಲನ ಸೃಷ್ಟಿಸಿದೆ. ಈ ಹಗರಣದಲ್ಲಿ ಖ್ಯಾತನಾಮರು ಸೇರಿ ಹಲವರ ಹೆಸರು ಕೂಡ ಹರಿದಾಡಿದೆ. ಬಾಲಿವುಡ್‌ನಲ್ಲೂ ಈ ಸಂಬಂಧ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಈ ಹಿಂದೆ ನಟ ಮತ್ತು ಫಿಟೈಸ್ ಪ್ರಭಾವಿ ಸಾಹಿಲ್ ಖಾನ್ ನನ್ನು ಈ ಹಗರಣ ಸಂಬಂಧ ಬಂಧಿಸಲಾಗಿತ್ತು. ಸದ್ಯ ಜೈಪುರದಲ್ಲಿ ಬಂಧಿತರಾಗಿರುವ ಅರೋಪಿಗಳನ್ನು ವಿಚಾರಣೆ ನಡೆಸಿ, ಸೌರಭ್ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವರದಿ ತಿಳಿಸಿದೆ.
The Enforcement Directorate (ED) team from Raipur, Chhattisgarh, conducted a raid at private hotel located in the Kukas area of Jaipur. The action was taken in connection with the ongoing investigation into the Mahadev Betting App case. According to ED sources, the agency had received a confidential tip-off that several individuals associated with the betting app were staying at the hotel to attend a wedding.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm