ಬ್ರೇಕಿಂಗ್ ನ್ಯೂಸ್
07-07-25 03:30 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮಂಗಳೂರಿನ ಮಹಿಳೆಯೊಬ್ಬರನ್ನು ಆನ್ಲೈನ್ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮೂರು ಕೋಟಿ 15 ಲಕ್ಷ ರೂಪಾಯಿಗೂ ಹೆಚ್ಚು ಹಣವನ್ನು ಪೀಕಿಸಿದ್ದು ವಂಚನೆಗೀಡಾದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಜೂನ್ 6ರಂದು ಬೆಳಗ್ಗೆ 10:25ರ ಸುಮಾರಿಗೆ ಮಹಿಳೆಗೆ 8260865038 ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದವರು ತಾನು ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡಿದ್ದು, NCRP (ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್)ನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಮಹಿಳೆಯ ಗಂಡನ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಆ ಸಿಮ್‌ನಿಂದ ವಂಚನೆಯ ಕರೆಗಳು ಮತ್ತು ಲಿಂಕ್‌ಗಳನ್ನು ಸಾರ್ವಜನಿಕರಿಗೆ ಕಳುಹಿಸಲಾಗುತ್ತಿದ್ದು ಈ ಬಗ್ಗೆ ಸಹಾರ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ನಂತರ ಕರೆಯನ್ನು ಸಹಾರ್ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ಹೇಳಿದ್ದ. ಆ ಬಳಿಕ ಅಲ್ಲಿನ ಸಬ್ ಇನ್ಸ್‌ಪೆಕ್ಟರ್ ತಾನು ಎಂದು ಮೋಹನ್ ಕುಮಾರ್ ಎಂಬಾತ ಮಾತನಾಡಿದ್ದು, ಮಹಿಳೆಯ ವೈಯಕ್ತಿಕ ಬ್ಯಾಂಕ್ ಖಾತೆಗಳ ಮಾಹಿತಿ ಪಡೆದುಕೊಂಡಿದ್ದ. ಆ ನಂತರ ಕರೆಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ದೀಪಕ್ ವೆಂಕಟರಮಣ ಎಂಬಾತನಿಗೆ ವರ್ಗಾಯಿಸುವುದಾಗಿ ಹೇಳಿದ್ದಾನೆ. ಬಳಿಕ ದೀಪಕ್ ಎಂಬ ಹೆಸರಿನ ವ್ಯಕ್ತಿ ಮಹಿಳೆಯ ಮತ್ತು ಅವರ ಗಂಡನ ಬ್ಯಾಂಕ್ ಖಾತೆಯ ವಿವರಗಳನ್ನು ಸಂಗ್ರಹಿಸಿದ್ದಾನೆ.
ಈ ವ್ಯಕ್ತಿಗಳು, ಬ್ಯಾಂಕ್ ಖಾತೆಗಳ ಪರಿಶೀಲನೆಗಾಗಿ ಹಣ ಪಾವತಿಸುವಂತೆ ಸೂಚಿಸಿದ್ದು ಆ ಮೊತ್ತವನ್ನು ಡಿಪಾಸಿಟ್ ಇಡುತ್ತೇವೆ, ಪಾವತಿಸಿದ ಎಲ್ಲ ಹಣವನ್ನು ವಾಪಸ್ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ವಿಷಯವನ್ನು ಯಾರಿಗೂ ತಿಳಿಸದಂತೆಯೂ ಹೇಳಿದ್ದಾರೆ. ಮಹಿಳೆ ಭಯಗೊಂಡು ಯಾರೊಂದಿಗೂ ಮಾಹಿತಿ ತಿಳಿಸಿರಲಿಲ್ಲ.
ಜೂನ್ 10ರಿಂದ ಜೂನ್ 27ರ ವರೆಗೆ, ಮಹಿಳೆ ಮತ್ತು ಅವರ ಗಂಡನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 3,16,52,142 ರೂಪಾಯಿಗಳನ್ನು ವಂಚಕರು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾಯಿಸಲಾಗಿದೆ. ಆನಂತರ, ವಂಚಕರು ಫೋನ್ ಸಂಪರ್ಕಕ್ಕೆ ಸಿಗದೇ, ಕರೆಗಳನ್ನು ಬ್ಲಾಕ್ ಮಾಡಿದ್ದಾರೆ.
ಮಹಿಳೆ ಭಯಗೊಂಡು ತಮ್ಮ ಮಕ್ಕಳಿಗೆ ಈ ವಿಷಯವನ್ನು ತಿಳಿಸಿದ್ದು ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ. ತನ್ನನ್ನು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮಹಿಳೆ ದೂರು ಸಲ್ಲಿಸಿದ್ದಾರೆ. ಇದೀಗ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದೇ ರೀತಿ, ಹೈದರಾಬಾದ್ನ ಅಮೀರ್ಪೇಟೆಯ ವ್ಯಕ್ತಿಯೊಬ್ಬರಿಗೆ ಕಳೆದ ತಿಂಗಳು ವಂಚಕರು ಮೋಸ ಮಾಡಿದ್ದರು. ದೆಹಲಿ ಪೊಲೀಸ್ ಅಧಿಕಾರಿಗಳೆಂದು ಹೇಳಿ ಫೋನಾಯಿಸಿ ಹಿರಿಯ ನಾಗರಿಕರೊಬ್ಬರಿಗೆ ಮಕ್ಮಲ್ ಟೋಪಿ ಹಾಕಿರುವ ಪ್ರಕರಣ ನಡೆದಿತ್ತು. ಇಂಥ ಪ್ರಕರಣಗಳು ಆಗಾಗ್ಗೆ ನಡೆಯತ್ತಿದ್ದು, ಸಾರ್ವಜನಿಕರು ವಿಶೇಷ ಎಚ್ಚರ ವಹಿಸಬೇಕು ಎಂದು ಪೊಲೀಸರು ಎಚ್ಚರಿಸುತ್ತಿದ್ದಾರೆ.
In a shocking incident, a woman from Mangalore has fallen victim to a massive cyber fraud, losing over ₹3.16 crore after fraudsters tricked her under the guise of a so-called “Digital Arrest.” The victim has now lodged a formal police complaint. The ordeal began on June 6 at around 10:25 AM, when the woman received a call from 8260865038. The caller introduced herself as Anu Sharma,
30-01-26 06:35 pm
Bangalore Correspondent
ಪೊಲೀಸ್ ಇನ್ಸ್‌ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm