ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm