ಬ್ರೇಕಿಂಗ್ ನ್ಯೂಸ್
10-07-25 12:04 pm HK News Desk ಕ್ರೈಂ
ಹಾಸನ, ಜು 10 : ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ.

ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು.
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮಲಗಿದ್ದ. ನನಗೆ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಫೋನ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಅಕ್ಕ ಮನೆಗೆ ಬಂದು ನೋಡಿದಾಗ ತಂದೆ ಮತ್ತು ಅಣ್ಣನ ಹೆಣ ಬಿದ್ದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
In a shocking incident stemming from a property dispute, a man brutally murdered his father and elder brother in Ganguru village of Holenarasipura taluk, Hassan district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm