ಬ್ರೇಕಿಂಗ್ ನ್ಯೂಸ್
15-07-25 05:21 pm Mangalore Correspondent ಕ್ರೈಂ
ಮಂಗಳೂರು, ಜುಲೈ 15 : ವ್ಯಕ್ತಿಯೊಬ್ಬರ ಬಗ್ಗೆ ಕೋಮು ದ್ವೇಷ ಮೂಡಿಸುವ ರೀತಿ ಬರಹಗಳನ್ನು ಬರೆದು ಹಿಂದು ಯುವತಿಯರನ್ನು ಮತಾಂತರ ಮಾಡಲು ಯತ್ನಿಸುತ್ತಿದ್ದಾರೆಂದು ಆರೋಪಿಸಿ ವಾಟ್ಸಪ್ ನಲ್ಲಿ ಷೇರ್ ಮಾಡಿದ್ದು, ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸುರತ್ಕಲ್ ಹೊಸಬೆಟ್ಟುವಿನಲ್ಲಿ ಆರ್ ವಿ ಎಂಟರ್ ಪ್ರೈಸಸ್ ಎನ್ನುವ ಹೆಸರಿನಲ್ಲಿ ಉದ್ಯಮ ನಡೆಸುತ್ತಿರುವ ರಾಜೇಶ್ ಹೊನ್ನಕಟ್ಟೆ ಎಂಬವರ ಬಗ್ಗೆ ಹಿಂದುಗಳಲ್ಲಿ ಕೋಮು ಭಾವನೆ ಕೆರಳಿಸುವ ರೀತಿ ವಾಟ್ಸಪ್ ನಲ್ಲಿ ಬರಹಳಗಳನ್ನು ಬರೆದು ಷೇರ್ ಮಾಡಿದ್ದ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಿದ್ದರು. ರಾಜೇಶ್ ಅವರು ಈವರೆಗೆ 20ಕ್ಕೂ ಹೆಚ್ಚು ಯುವತಿಯರನ್ನು ಮತಾಂತರ ಮಾಡಿದ್ದಾರೆ, ಅಲ್ಲದೆ, ಬ್ಲೂಫಿಲಂ ಸಿಡಿ ಮಾಡಿ ಮಾರಾಟ ಮಾಡುತ್ತಿದ್ದಾರೆ. 24 ವರ್ಷದ ಹಿಂದು ಯುವತಿಯನ್ನು ತನ್ನ ತಮ್ಮನಿಗೆ ಮದುವೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಆ ಹಿಂದು ಯುವತಿ ಹಣೆಗೆ ಕುಂಕುಮ ಹಾಕುವುದನ್ನು, ದೇವಸ್ಥಾನಕ್ಕೆ ಹೋಗುವುದನ್ನು ನಿಲ್ಲಿಸಿದ್ದು ಚರ್ಚ್ ನಲ್ಲಿ ಪ್ರಾರ್ಥನೆಗೆ ಹೋಗುತ್ತಿದ್ದಾಳೆ ಇತ್ಯಾದಿ ಸುಳ್ಳು ಆರೋಪಗಳನ್ನು ವಾಟ್ಸಪ್ ಗ್ರೂಪ್ ಗಳಲ್ಲಿ ಹರಿಯಬಿಟ್ಟಿದ್ದ.
ಪೊಲೀಸರು ತನಿಖೆ ನಡೆಸಿ ಕುಳಾಯಿ ನಿವಾಸಿ ರಾಮಪ್ರಸಾದ್ (42) ಎಂಬಾತನನ್ನು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ರೌಡಿ ಕೋಡಿಕೆರೆ ಲೋಕೇಶ್ ಕೂಡ ಭಾಗಿಯಾದ ಆರೋಪ ಹೊಂದಿದ್ದು, ಸದ್ಯಕ್ಕೆ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿ ಉಡುಪಿ ಜಿಲ್ಲಾ ಕಾರಾಗೃಹದಲ್ಲಿದ್ದಾನೆ. ಸದ್ರಿ ಪ್ರಕರಣ ಸಂಬಂಧಿಸಿ ಬಾಡಿ ವಾರೆಂಟ್ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Police have arrested a man for allegedly spreading communal hatred through WhatsApp messages by making false claims that a local businessman was involved in converting Hindu women to another religion. The case has been registered at the Surathkal Police Station.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm