ಬ್ರೇಕಿಂಗ್ ನ್ಯೂಸ್
16-08-25 07:06 pm Bangalore Correspondent ಕ್ರೈಂ
ಬೆಂಗಳೂರು, ಆ 16 : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೇ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಮಹಿಳೆ ಸೇರಿ ಇಬ್ಬರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ಸಂಚಾರ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಬಿ.ಜಿ.ನಿರ್ಮಲ ನೀಡಿದ್ದ ದೂರಿನ ಅನ್ವಯ ಮೊಹಮ್ಮದ್ ಸರ್ಬಾಸ್ ಮತ್ತು ಹಿರಲ್ ವ್ಯಾಸ್ ಎಂಬಿಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಿರ್ಮಲ ಅವರು ಆ.14ರಂದು ಬೆಳಗ್ಗೆ ತಮ್ಮ ಸಿಬ್ಬಂದಿಯೊಂದಿಗೆ ಯಲಹಂಕ ಉಪನಗರದ ಶೇಷಾದ್ರಿಪುರ ಕಾಲೇಜಿನ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. 12.30ಕ್ಕೆ ಬುಲೆಟ್ ವಾಹನ ನೋ ಪಾರ್ಕಿಂಗ್ ನಿಲ್ಲಿಸಲಾಗಿತ್ತು. ಹೀಗಾಗಿ ಅದಕ್ಕೆ ಪೊಲೀಸರು ವ್ಹೀಲ್ ಕ್ಲಾಂಪ್ ಹಾಕಿದ್ದರು. ನಂತರ ಅಲ್ಲಿಗೆ ಬಂದ ವಾಹನದ ಮಾಲೀಕ ಮೊಹಮ್ಮದ್ ಸರ್ಬಾಸ್ಗೆ ನೋ ಪಾರ್ಕಿಂಗ್ ದಂಡ ಕಟ್ಟುವಂತೆ ಪೊಲೀಸರು ತಿಳಿಸಿದರು. ಆತ ಏರುಧ್ವನಿಯಲ್ಲಿ ಮಾತನಾಡಿದ್ದ. ದಂಡ ಕಟ್ಟುವುದಿಲ್ಲ. ದಂಡ ಕಟ್ಟಲು ಹಣವಿಲ್ಲ. ನೋ ಪಾರ್ಕಿಂಗ್ ಬೋರ್ಡು ಹಾಕಿದ್ದೀರಾ? ನಾನು ಬೈಕ್ ನಿಲ್ಲಿಸುವಾಗ ನೀವು ವಿಜಲ್ ಹಾಕಿ ಓಡಿಸಬೇಕಿತ್ತು ಎಂದು ವಾಗ್ವಾದ ಮಾಡಿ ಕರ್ತವ್ಯಕ್ಕೆ ಅಡ್ಡಪಡಿಸಿದ್ದ. ನಂತರ ಮಹಿಳೆಯೊಬ್ಬರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಓಡಿ ಹೋಗುವಂತೆ ಹೇಳಿದ ಮಹಿಳೆ:
ಸ್ವಲ್ಪ ಹೊತ್ತಿನ ಬಳಿಕ ಸ್ಥಳಕ್ಕೆ ಬಂದ ಮಹಿಳೆ ಹಿರಲ್ ವ್ಯಾಸ್ ಎಂಬಾಕೆ ತಂದಿದ್ದ ದ್ವಿಚಕ್ರ ವಾಹನವನ್ನು ಮೊಹಮ್ಮದ್ ಸರ್ಬಾನ್ಗೆ ಕೊಟ್ಟು ಇಲ್ಲಿಂದ ಓಡಿ ಹೋಗುವಂತೆ ಹೇಳಿದ್ದಾಳೆ. ಆಗ, ಟ್ರಾಫಿಕ್ ಪೊಲೀಸರು ದಂಡ ಪಾವತಿಸಿ ಹೋಗುವಂತೆ ಹೇಳಿದ್ದಾರೆ. ಆದರೆ, ಹಿರಲ್ ವ್ಯಾಸ್ ಕರ್ತವ್ಯದಲ್ಲಿದ್ದ ನಿರ್ಮಲಾ ಮತ್ತು ಸಿಬ್ಬಂದಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಅಸಭ್ಯವಾಗಿ ಕೈ ಸನ್ನೆ ಮಾಡಿ ಅವಮಾನ ಮಾಡಿದ್ದಾರೆ ಎಂದು ಎಫ್ಐಆರ್ನಲ್ಲಿ ವಿವರಿಸಲಾಗಿದೆ.
ಇದೀಗ ಮಹಿಳೆ ಸೇರಿ ಇಬ್ಬರನ್ನು ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ. ಹಿರಲ್ ವ್ಯಾಸ್ ಅವರ ಕ್ಲಿನಿಕ್ನಲ್ಲಿ ಮೊಹಮ್ಮದ್ ಸರ್ಬಾಸ್ ಕೆಲಸ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಪೊಲೀಸರು, 'ಪೊಲೀಸರ ಮೇಲೆ ಕೂಗಾಡುವುದರಿಂದ ನೀವು ವೀರರಾಗುವುದಿಲ್ಲ. ಅಸಭ್ಯ ಪದಗಳು ಮತ್ತು ಬೆದರಿಕೆಗಳು ನಿಮಗೆ ವಿಶೇಷ ವ್ಯಕ್ತಿಯಂತೆ, ವಿಶೇಷ ಉಪಚಾರದ ಪಾಸ್ಗೆ ಕಾರಣವಾಗಬಹುದು, ಅದುವೇ ಪೊಲೀಸ್ ಠಾಣೆಗೆ. ಎಚ್ಚರಿಕೆ! ಬೆಂಗಳೂರು ನಗರ ಪೊಲೀಸರು ನಿಮ್ಮನ್ನು ಗಮನಿಸುತ್ತಿದ್ದಾರೆ' ಎಂದು ಅಡಿಬರಹ ನೀಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
A man and a woman who verbally abused #TrafficPolice personnel in #Bengaluru have been arrested & have been remanded to judicial custody.Police have released a video showing the duo before & after their arrest,underscoring the swift & decisive action taken by law enforcement. pic.twitter.com/T3mTQ0lQ0X
— Yasir Mushtaq (@path2shah) August 15, 2025
In a dramatic incident near Yelahanka, Bengaluru, a woman and a man were arrested after they allegedly obstructed police duty and hurled abuses at traffic police officers. The incident, captured on video, has since gone viral on social media.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm