ಬ್ರೇಕಿಂಗ್ ನ್ಯೂಸ್
24-08-25 12:41 pm HK News Desk ಕ್ರೈಂ
ನವದೆಹಲಿ, ಆ 24 : ಅಕ್ರಮ ಆನ್ಲೈನ್ ಮತ್ತು ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ. ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಗ್ಯಾಂಗ್ಟಾಕ್ನಲ್ಲಿ ಬಂಧಿಸಿದೆ. ಇದೇ ವೇಳೆ ದಾಳಿಯ ವೇಳೆ ಭಾರೀ ಪ್ರಮಾಣದ ನಗದು ಹಾಗೂ ಚಿನ್ನಾಭರಣಗಳು ಪತ್ತೆಯಾಗಿದೆ.
ವಿರೇಂದ್ರ ಪಪ್ಪಿ ತನ್ನ ಸಹಚರರೊಂದಿಗೆ ಸಿಕ್ಕಿಂನ ಗ್ಯಾಂಗ್ಟಾಕ್ಗೆ ಪ್ರಯಾಣಿಸಿದ್ದರು. ಅಲ್ಲಿ ಅವರು ಕ್ಯಾಸಿನೊಗಾಗಿ ಒಂದು ತುಂಡು ಭೂಮಿಯನ್ನು ಗುತ್ತಿಗೆಗೆ ಪಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಸಂಸ್ಥೆಯು ವಿರೇಂದ್ರ ಪಪ್ಪಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ 30 ಕಟ್ಟಡಗಳ ಮೇಲೆ ದಾಳಿ ನಡೆಸಿದ ಒಂದು ದಿನದ ನಂತರ, ಸುಮಾರು ಒಂದು ಕೋಟಿ ವಿದೇಶಿ ಕರೆನ್ಸಿ, ಸುಮಾರು 6 ಕೋಟಿ ಮೌಲ್ಯದ ಚಿನ್ನದ ಆಭರಣಗಳು ಮತ್ತು ಸುಮಾರು 10 ಕೆಜಿ ತೂಕದ ಬೆಳ್ಳಿ ವಸ್ತುಗಳು ಮತ್ತು ನಾಲ್ಕು ವಾಹನಗಳು ಸೇರಿದಂತೆ 12 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ.



ಕೇಂದ್ರ ತನಿಖಾ ಏಜೆನ್ಸಿಯು 17 ಬ್ಯಾಂಕ್ ಖಾತೆಗಳು ಮತ್ತು ಎರಡು ಬ್ಯಾಂಕ್ ಲಾಕರ್ಗಳನ್ನು ಸಹ ಸ್ಥಗಿತಗೊಳಿಸಿದೆ. ವೀರೇಂದ್ರ ಪಪ್ಪಿ ಅವರ ಸಹೋದರ ಕೆ. ಸಿ. ನಾಗರಾಜ್ ಮತ್ತು ಅವರ ಮಗ ಪೃಥ್ವಿ ಎನ್ ರಾಜ್ ಅವರ ಮನೆಗಳಿಂದ ಆಸ್ತಿಗೆ ಸಂಬಂಧಿಸಿದ ಅನೇಕ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತರ ಸಹಚರರಾದ ಸಹೋದರ ಕೆ. ಸಿ. ತಿಪ್ಪೇಸ್ವಾಮಿ ಮತ್ತು ಪೃಥ್ವಿ ಎನ್. ರಾಜ್ ಅವರು ದುಬೈಯಿಂದ ಆನ್ಲೈನ್ ಗೇಮಿಂಗ್ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ದಾಳಿಯ ವೇಳೆ ಭಾರೀ ಪ್ರಮಾಣದ ಹಣ ಹಾಗೂ ಚಿನ್ನಾಭರಣಗಳು ಪತ್ತೆಯಾಗಿರುವುದು ಪ್ರಕರಣದ ತೀವ್ರತೆಯನ್ನು ಸೂಚಿಸುತ್ತಿದೆ. ಬೆಟ್ಟಿಂಗ್ ದಂಧೆಯಿಂದ ಸಂಪಾದಿಸಿದ ಆದಾಯವನ್ನು ಮತ್ತಷ್ಟು ಗುರುತಿಸಲು ವೀರೇಂದ್ರನನ್ನು ಬಂಧಿಸಿ ಗ್ಯಾಂಗ್ಟಾಕ್ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿಗಿದೆ.
ವಿವಿಧ ಹೆಸರಿನಲ್ಲಿ ಗೇಮಿಂಗ್ ಹಾಗೂ ಬೆಟ್ಟಿಂಗ್ ದಂಧೆ!
ಗೋವಾದಲ್ಲಿ, ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ವಿರೇಂದ್ರ ಪಪ್ಪಿಗೆ ಸಂಬಂಧಿಸಿದ ಐದು ಕ್ಯಾಸಿನೊಗಳಾದ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊಗಳಲ್ಲಿ ಇಡಿ ಶೋಧ ನಡೆಸಿದೆ. ಆರೋಪಿತ ಕೆ. ಸಿ. ವೀರೇಂದ್ರ ಪಪ್ಪಿ ಅವರು ಕಿಂಗ್ 567, ರಾಜಾ 567, ಪಪ್ಪೀಸ್ 003 ಮತ್ತು ರತ್ನಾ ಗೇಮಿಂಗ್ ನಂತಹ ಹಲವಾರು ಆನ್ಲೈನ್ ಬೆಟ್ಟಿಂಗ್ ಸೈಟ್ಗಳನ್ನು ನಡೆಸುತ್ತಿರುವುದು ಶೋಧ ಕಾರ್ಯಾಚರಣೆಯ ವೇಳೆ ಬಹಿರಂಗವಾಗಿದೆ. ಇದಲ್ಲದೆ, ಆರೋಪಿಯ ಸಹೋದರ ಕೆ. ಸಿ. ತಿಪ್ಪೇಸ್ವಾಮಿ ದುಬೈಯಿಂದ ಡೈಮಂಡ್ ಸಾಫ್ಟೆಕ್, ಟಿಆರ್ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜಿ ಎಂಬ ಮೂರು ವ್ಯಾಪಾರ ಘಟಕಗಳನ್ನು ನಿರ್ವಹಿಸುತ್ತಿದ್ದಾರೆ "ಎಂದು ಮೂಲಗಳು ತಿಳಿಸಿವೆ. ಈ ಘಟಕಗಳು ಕೆ. ಸಿ. ವೀರೇಂದ್ರ ಅವರ ಕಾಲ್ ಸೆಂಟರ್ಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎನ್ನಲಾಗಿದೆ.
The Directorate of Enforcement (ED) on Saturday arrested Karnataka Congress MLA KC Veerendra Puppy in connection with a case involving illegal online and offline betting.
21-10-26 10:31 pm
HK News Desk
ಸಕಲೇಶಪುರ ; ನಕಲಿ ದಾಖಲೆ ಸೃಷ್ಟಿಸಿ ಬರೋಬ್ಬರಿ 13,10...
20-10-26 06:06 pm
ಮೈಸೂರು ದಸರಾ ಕಂಬಳ ಸಂಪನ್ನ ; 16 ಗ್ರಾಂ ಚಿನ್ನ ಗೆದ್...
20-10-26 11:04 am
ಸಂಪುಟದಲ್ಲಿ ಮಹಿಳೆಗೆ ಸಿಗದ ಸ್ಥಾನ ; ಮಹಿಳಾ ಕಾಂಗ್ರ...
17-10-26 07:30 pm
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
21-10-26 04:21 pm
HK News Desk
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಾವನ್...
20-10-26 12:41 pm
Annamalai: ತಮಿಳುನಾಡಿನಲ್ಲಿ ಚುನಾವಣಾ ಅಖಾಡಕ್ಕೆ ಅಣ...
14-10-26 04:59 pm
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
22-10-26 09:37 pm
HK News Desk
ರೆಸ್ಲರ್ ‘ಗ್ರೇಟ್ ಖಲಿ’ ನೋಡಲು ಹುಚ್ಚೆದ್ದು ಸೇರಿದ ಅ...
21-10-26 09:20 pm
ಕದ್ರಿ ರಾಜಾಂಗಣದಲ್ಲಿ ‘ಅಷ್ಟಭುಜೆ’ಯಾಗಿ ಅವತರಿಸಿದ ಆರ...
21-10-26 07:52 pm
Mangalore Accident, Ullal: ಓವರ್ ಟೇಕ್ ಧಾವಂತದಲ್...
19-10-26 08:41 pm
ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನ 10 ವರ್ಷಕ್ಕೆ ಮಿತ...
19-10-26 07:10 pm
22-10-26 03:21 pm
HK News Staffer
ಮೂಡುಬಿದಿರೆಯಲ್ಲಿ ಕರುಣಾಜನಕ ದುರಂತ ; ಮಗನನ್ನು ರಕ್ಷ...
22-10-26 01:03 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಂತಿದ್ದ ಗ್ಯಾಸ್ ಟ್...
22-10-26 01:01 pm
Boliyaru Murder Case, Dakshina Kannada Crime...
22-10-26 10:32 am
ಬೋಳಿಯಾರಿನಲ್ಲಿ ಸ್ಕೂಟರ್ ಸವಾರರ ಸಾವು ಪ್ರಕರಣ ; ಅಪಘ...
20-10-26 05:06 pm