ಬ್ರೇಕಿಂಗ್ ನ್ಯೂಸ್
05-09-25 12:34 pm Udupi Correspondent ಕ್ರೈಂ
ಉಡುಪಿ, ಸೆ.5 : ಒಂದೂವರೆ ವರ್ಷದ ಮಗುವಿನೊಂದಿಗೆ ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಹೆರಂಜೆ ನಿವಾಸಿ, 16 ವರ್ಷಗಳ ಹಿಂದಿನ ಕೊಲೆಯತ್ನ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ ಸುಭಾಷ್ ನಾಯ್ಕನನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟಿಗೆ ಹಾಜರುಪಡಿಸಿದ್ದು, ಜೈಲಿಗೆ ಹಾಕಲಾಗಿದೆ.
2009ರಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಸುಭಾಷ್ ನಾಯ್ಕನನ್ನು 2012ರಲ್ಲಿ ಜಿಲ್ಲಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ವಿಧಿಸಿತ್ತು. ಇದನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿ, 13 ವರ್ಷಗಳ ವಿಚಾರಣೆ ಬಳಿಕ 2025ರ ಜುಲೈನಲ್ಲಿ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಇದರ ಬೆನ್ನಲ್ಲೇ ಬಂಧನ ಭೀತಿಯಿಂದ ಸುಭಾಷ್ ನಾಯ್ಕ ನಾಪತ್ತೆಯಾಗಿದ್ದ. ಮನೆಯಲ್ಲಿ ಪತ್ನಿ ಸುಶ್ಮಿತಾ ಮತ್ತು ಮಗು ಇಬ್ಬರೇ ಇದ್ದು ಸುಭಾಷ್ ನಾಯ್ಕಗೆ ವಾರೆಂಟ್ ನೋಟಿಸ್ ಬರುತ್ತಿತ್ತು. ಇದರಿಂದ ಮನನೊಂದು ಗಂಡನಿಗೆ 12 ವರ್ಷ ಶಿಕ್ಷೆಯಾಗಿದೆ, ತನಗೆ ಇನ್ನಾರು ಗತಿಯೆಂದು ಸುಶ್ಮಿತಾ ಸೋಮವಾರ ತನ್ನ ಮಗುವನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದರು.
ಮಂಗಳವಾರ ಉಡುಪಿ ತಾಲೂಕು ತಹಸೀಲ್ದಾರ್ ಪಿ.ಆರ್.ಗುರುರಾಜ ಸಮ್ಮುಖದಲ್ಲಿ ಮಣಿಪಾಲದಲ್ಲಿ ಮರಣೋತ್ತರ ಪ್ರಕ್ರಿಯೆ ನಡೆಸಿ ಬಳಿಕ ಆರೂರು ಗ್ರಾಮ ಪಂಚಾಯಿತಿ ರುದ್ರಭೂಮಿಯಲ್ಲಿ ತಾಯಿ- ಮಗುವಿನ ಅಂತ್ಯಸಂಸ್ಕಾರ ನಡೆಸಲಾಯಿತು. ಈ ಸಂದರ್ಭ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದ ಸುಭಾಷ್ ನಾಯ್ಕನನ್ನು ಪೊಲೀಸರು ಬಂಧಿಸಿದ್ದಾರೆ. 16 ವರ್ಷಗಳ ಹಿಂದೆ ನೆರೆಮನೆಯ ವ್ಯಕ್ತಿಯ ಮೇಲೆ ಹಲ್ಲೆಗೈದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿ ಸುಭಾಷ್ ಗೆ ಗರಿಷ್ಠ 12 ವರ್ಷಗಳ ಶಿಕ್ಷೆ ನೀಡಲಾಗಿತ್ತು.
In a tragic turn of events in Brahmavar, a man who had come to attend the funeral of his wife and child was arrested by the police in connection with a 16-year-old attempt-to-murder case.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm