ಬ್ರೇಕಿಂಗ್ ನ್ಯೂಸ್
05-09-25 10:53 pm Mangalore Correspondent ಕ್ರೈಂ
ಮಂಗಳೂರು, ಸೆ.5 : ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ಪೆರ್ನೆಯಲ್ಲಿ ಹಟ್ಟಿಯಿಂದ ಹಸುವನ್ನು ಕದ್ದು ಅಲ್ಲಿಯೇ ತೋಟದಲ್ಲಿ ಕಡಿದು ಮಾಂಸಗೈದ ಪ್ರಕರಣದಲ್ಲಿ ಮಂಗಳೂರಿನ ಕುದ್ರೋಳಿಯ ಬೀಫ್ ಸ್ಟಾಲ್ ಮಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಕುದ್ರೋಳಿ ನಿವಾಸಿ, ಬೀಫ್ ಸ್ಟಾಲ್ ಮಾಲಕ ಮಹಮ್ಮದ್ ಮನ್ಸೂರ್ (48), ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಬಂಧಿತರು.
ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿ ಗುರುವಾರ ನಸುಕಿನಲ್ಲಿ ದೇಜಪ್ಪ ಮೂಲ್ಯ ಎಂಬವರ ಮನೆ ಹಟ್ಟಿಯಲ್ಲಿದ್ದ ಗಬ್ಬದ ಹಸುವನ್ನು ಕದ್ದೊಯ್ದು ಅವರದೇ ತೋಟದಲ್ಲಿ ಕಡಿದು ಮಾಂಸ ಮಾಡಿ ಒಯ್ಯಲಾಗಿತ್ತು. ದುಷ್ಕರ್ಮಿಗಳ ಕೃತ್ಯದ ಭಾರೀ ಆಕ್ರೋಶ ಕೇಳಿಬಂದಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಮುಖಂಡರು ಆಗ್ರಹ ಮಾಡಿದ್ದರು. ಪುತ್ತೂರು ಶಾಸಕ ಅಶೋಕ್ ರೈ ಕೂಡ ಆಕ್ರೋಶ ವ್ಯಕ್ತಪಡಿಸಿ, ಹಸುವನ್ನು ಕದ್ದು ಹತ್ಯೆಗೈದ ಆರೋಪಿಗಳ ಕೈ ಕಡಿಯಬೇಕೆಂದು ಹೇಳಿದ್ದರು.
ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೇ ಆರೋಪಿಗಳು ಆ.14ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವುಗೈದು, ಅಲ್ಲಿಯೇ ಪರಿಸರದಲ್ಲಿ ಹತ್ಯೆಗೈದು ಮಾಂಸ ಮಾಡಿದ್ದು ಪತ್ತೆಯಾಗಿತ್ತು. ಮರುದಿನ ಅದರ ಅವಶೇಷಗಳು ಅಲ್ಲಿಯೇ ಸಮೀಪದಲ್ಲಿ ಪತ್ತೆಯಾಗಿತ್ತು. ಘಟನೆಗೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2), BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ತುಂಬೆಯ ಘಟನೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸದೆ ನಿರ್ಲಕ್ಷ್ಯ ತೋರಿದ್ದೇ ಉಪ್ಪಿನಂಗಡಿ ಬಳಿ ದನವನ್ನು ಹಟ್ಟಿಯಿಂದ ಎಳೆದೊಯ್ದು ಹತ್ಯೆಗೈಯಲು ಕಾರಣವಾಗಿತ್ತು. ಇದೀಗ ಎರಡೂ ಪ್ರಕರಣ ಒಂದೇ ರೀತಿ ಇರೋದನ್ನು ಅರಿತು ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
In a shocking incident, a cow was stolen from a cowshed and slaughtered in a nearby plantation in Perenne village under Uppinangady Police limits. The incident has sparked outrage, leading to the arrest of three individuals, including the owner of a beef stall in Kudroli, Mangaluru. The arrested have been identified as: Mohammed Mansoor (48), a resident of Kudroli and owner of a beef stall. Irshad (34), resident of Chembugudde, Ullal. Abdul Azeem (18),
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am