ಬ್ರೇಕಿಂಗ್ ನ್ಯೂಸ್
06-09-25 07:45 pm HK News Desk ಕ್ರೈಂ
ಮುಂಬೈ, ಸೆ 06: ಉದ್ಯಮಿಯೊಬ್ಬರಿಗೆ 60 ಕೋಟಿ ರೂ. ವಂಚನೆ ಮಾಡಿರುವ ಆರೋಪ ಸಂಬಂಧ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.
ಬೆಸ್ಟ್ ಡೀಲ್ ಟಿವಿ ಪ್ರೈವೇಟ್ ಲಿಮಿಟೆಡ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಲು ನಟಿ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಹಣ ಹೂಡಿಕೆ ಮಾಡಿದ್ದು, ಈ ಸಂಬಂಧ ಉದ್ಯಮಿ ದೀಪಕ್ ಕೊಠಾರಿ ಎಂಬ ವ್ಯಕ್ತಿಗೆ 60ಕೋಟಿ ರೂ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆರ್ಥಿಕ ಅಪರಾಧ ದಳ ಮುಂಬೈ ಪೊಲೀಸರಿಗೆ ಸೂಚನೆ ನೀಡಿದ್ದು, ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ಮನೆಯಲ್ಲಿ ಇಲ್ಲದ ಕಾರಣ ಹಾಗೂ ಆಗಾಗ್ಗೆ ಈ ಇಬ್ಬರು ವಿದೇಶ ಪ್ರವಾಸ ಕೈಗೊಳ್ಳುವ ಹಿನ್ನೆಲೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯಮಿ ದೀಪಕ್ ಕೋಠಾರಿ ಅನ್ನೋರು 2015 ಮತ್ತು 2023ರ ಅವಧಿಯಲ್ಲಿ ಸ್ಟಾರ್ ಜೋಡಿ ನನ್ನ ಬಳಿ 60 ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿದೆ. ನಾನು ನೀಡಿದ್ದ ಹಣವನ್ನು ವೈಯಕ್ತಿಕ ಬಳಕೆಗೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ದಂಪತಿ ಹಣವನ್ನು ಆರಂಭದಲ್ಲಿ ಸಾಲ ಎಂದು ಪಡೆದಿದ್ದರು. ನಂತರ ಹೂಡಿಕೆ ಎಂದು ಟ್ಯಾಕ್ಸ್ ಸೇವಿಂಗ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉದ್ಯಮಿ ಕೋಠಾರಿ ಪ್ರಕಾರ, ಶಿಲ್ಪಾ ಶೆಟ್ಟಿ ದಂಪತಿ ಪಡೆದಿದ್ದ ಹಣವನ್ನು ಶೇಕಡಾ 12 ರಷ್ಟು ಬಡ್ಡಿಯೊಂದಿಗೆ ನಿರ್ದಿಷ್ಟ ಅವಧಿಗೆ ಹಿಂತಿರುಗಿಸಬೇಕಾಗಿತ್ತು. 2016ರಲ್ಲಿ ಈ ಬಗ್ಗೆ ಆ ದಂಪತಿ ಲಿಖಿತ ಪತ್ರದ ಮೂಲಕ ಭರವಸೆ ಕೂಡ ನೀಡಿತ್ತು. ಆದರೆ ಹಣ ಪಡೆದು ವಾಪಸ್ ನೀಡಲೇ ಇಲ್ಲ ಎಂದು ಆರೋಪಿಸಿದ್ದಾರೆ.
ಲುಕ್ ಔಟ್ ಸರ್ಕ್ಯುಲರ್ ಎನ್ನುವುದು ಸಾಮಾನ್ಯವಾಗಿ ವಲಸೆ ಮತ್ತು ಗಡಿ ನಿಯಂತ್ರಣ ಬಿಂದುಗಳಿಗೆ ಎಚ್ಚರಿಕೆ ನೀಡುವ ಮೂಲಕ ಒಬ್ಬ ವ್ಯಕ್ತಿ ದೇಶವನ್ನು ತೊರೆಯುವುದನ್ನು ತಡೆಯಲು ಅಥವಾ ಅವರ ಚಲನವಲನಗಳನ್ನು ಪತ್ತೆಹಚ್ಚಲು ಬಳಸುವ ಒಂದು ಕಾರ್ಯವಿಧಾನವಾಗಿದೆ.
Mumbai Police have issued a Look Out Circular (LOC) against Bollywood actress Shilpa Shetty and her husband Raj Kundra in connection with an alleged ₹60 crore fraud case filed by a businessman.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am