ಬ್ರೇಕಿಂಗ್ ನ್ಯೂಸ್
11-09-25 09:13 pm Mangalore Correspondent ಕ್ರೈಂ
ಮಂಗಳೂರು, ಸೆ.11 : ಉರ್ವಾ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನಿಯಾಜ್ ಅಲಿಯಾಸ್ ನಿಯಾ ಎಂಬಾತನನ್ನು ಬೆಂಗಳೂರಿನ ಹುಳಿಮಾವು ಅರಕೆರೆ ಎಂಬಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ.
ಮಂಗಳೂರು ಮತ್ತು ಉಡುಪಿ ಜಿಲ್ಲೆಯ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಒಟ್ಟು 13 ಪ್ರಕರಣಗಳು ಈತನ ವಿರುದ್ಧ ದಾಖಲಾಗಿದ್ದು, ಹಲವು ಕಡೆಯ ನ್ಯಾಯಾಲಯಗಳು ವಾರೆಂಟ್ ಹೊರಡಿಸಿದ್ದವು.
ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಪೊಲೀಸರು ಚುರುಕಾಗಿದ್ದು ಹಳೆ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದವರನ್ನು ಪತ್ತೆ ಹಚ್ಚುತ್ತಿದ್ದಾರೆ. ಎರಡು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 52 ವಿವಿಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.
ಅದರಲ್ಲಿ ಕೋಮು ಗಲಭೆ ಮುಂತಾದ ಪ್ರಕರಣಗಳಲ್ಲಿ ಭಾಗಿಯಾದ ಚಂದ್ರಹಾಸ ಕೇಶವ ಶೆಟ್ಟಿಗಾರ್, ಲೀಲಾಧರ್, ಖಾದರ್ ಕುಳಾಯಿ, ಶಾಕೀಬ್, ಮೊಹಮ್ಮದ್ ಹುಸೇನ್, ರಮೀಜ್ ಒಟ್ಟು 7 ಜನ ಅಲ್ಲದೆ ಬೇರೆ ಬೇರೆ ಠಾಣೆಗಳಲ್ಲಿ ರೌಡಿ ಶೀಟರ್ ಆಗಿರುವ ಆದಿತ್ಯ ಕುಮಾರ್, ಭರತ್ ಬಾಲು, ಮೊಹಮ್ಮದ್ ಸುಹೈಬ್, ಮೊಹಮ್ಮದ್ ಮುಸ್ತಾಫ್, ಮೊಹಮ್ಮದ್ ನಜೀಮ್, ಉಮ್ಮರ್ ನವಾಫ್, ಉಮ್ಮರ್ ಫಾರೂಕ್, ಫರಾಜ್, ಮೊಹಮ್ಮದ್ ನಿಯಾಜ್ ಒಟ್ಟು 9 ಜನ ಇದ್ದಾರೆ.
ಎನ್ಡಿಪಿಎಸ್ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಪುಂಪಾ ಕಾಶಿ, ದೀಪಾ ನಾರಾಯಣ, ಮೊಹಮ್ಮದ್ ನಿಹಾಲ್, ಮೊಹಮ್ಮದ್ ಶಫೀಕ್, ಬಾಬರ್ ಪಾಷಾ, ಮೊಹಮ್ಮದ್ ಇಕ್ಬಾಲ್, ಅಬೂಬಕರ್ ಸೇರಿ 7 ಜನ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಶಾನವಜ್ @ ಶಾನ್, ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಒಳಗೊಂಡಿರುವ ಗಣೇಶ್ ಲಕ್ಷ್ಮಣ್ ಸಾಕೇತ್, ಅದಿತ್ಯ ಕುಮಾರ್, ಅಬ್ದುಲ್ ನಾಸೀರ್, ಇಮ್ರಾನ್ @ ಇಂಬು, ರಮೀಜ್, ಮೊಹಮ್ಮದ್ ನಜೀಮ್ ಒಟ್ಟು 6 ಜನ ಆರೋಪಿಗಳನ್ನು ನ್ಯಾಯಲಯದ ಮುಂದೆ ಹಾಜರುಪಡಿಸಲಾಗಿದೆ.
ಅಲ್ಲದೇ ಹೆಚ್ಚು ಅವಧಿಯಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡು ಇದ್ದಂತಹ ನ್ಯಾಯಾಲಯದಿಂದ ವಾರೆಂಟ್ ಹೊರಡಿಸಿರುವ ಆರೋಪಿಗಳಾದ ವಿಶಾಲ್ ಕುಮಾರ್, ಮೊಹಮ್ಮದ್ ನಿಹಾಲ್, ಇರ್ಷಾದ್, ಹನೀಫ್ ಕೊಕ್ಕಡ ಮುಂತಾದ 12 ಜನ ಆರೋಪಿಗಳ ವಿರುದ್ಧ ಹೆಚ್ಚುವರಿಯಾಗಿ ಕಲಂ 208, 209, 269 ಬಿಎನ್ಎಸ್ ನಂತೆ ಪ್ರಕರಣ ದಾಖಲು ಮಾಡಲಾಗಿದೆ.
In a major breakthrough, police have arrested Niyaz alias Nia, the prime accused in a 2017 case involving assault and an attempt to murder a police officer registered at Urwa Police Station. The accused, who had been absconding and failing to appear before court for years, was tracked down and detained at Hulimavu, Arekere in Bengaluru.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm