ಬ್ರೇಕಿಂಗ್ ನ್ಯೂಸ್
16-09-25 07:12 pm HK News Desk ಕ್ರೈಂ
ಬೀದರ್, ಸೆ 16 : ಮಗುವನ್ನು ಆಟ ಆಡಿಸುವ ನೆಪದಲ್ಲಿ ಮಲತಾಯಿಯೊಬ್ಬಳು ಮೂರನೇ ಮಹಡಿಗೆ ಕರೆದೊಯ್ದು ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಸಿಸಿಟಿವಿ ದೃಶ್ಯದಿಂದ ಕ್ರೂರ ಕೃತ್ಯ ಬಯಲಾಗಿದ್ದು, ಈಗ ಮಲತಾಯಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾಳೆ.
ಏಳು ವರ್ಷದ ಸಾನ್ವಿ ಮೃತ ಬಾಲಕಿ. ಆರೋಪಿಯನ್ನು ರಾಧಾ ಎಂದು ಗುರುತಿಸಲಾಗಿದೆ.
ಮಲತಾಯಿ ರಾಧಾ ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಮೂರನೇ ಮಹಡಿಗೆ ಕರೆದೊಯ್ದಿದ್ದು, ಯಾರಿಗೂ ಕಾಣದಂತೆ ತಳ್ಳಿ ಕೊಲೆ ಮಾಡಿದ್ದಳು. ಆ ದಿನ ಎಲ್ಲರೂ ಸಾನ್ವಿ ಆಯತಪ್ಪಿ ಬಿದ್ದಿದ್ದಾಳೆ ಎಂದು ನಂಬಿದ್ದರು. ಮರುದಿನ ಮೃತ ಬಾಲಕಿ ತಂದೆ ಸಿದ್ಧಾಂತ ಅವರ ದೂರಿನ ಮೇರೆಗೆ ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ, ಕೆಲ ದಿನಗಳ ಬಳಿಕ ಮೃತ ಬಾಲಕಿ ತಂದೆಗೆ ಪಕ್ಕದ ಮನೆಯವರು ಸಿಸಿ ಟಿವಿಯ ವಿಡಿಯೋವೊಂದನ್ನು ಕಳುಹಿಸಿದ್ದು, ನೋಡಿ ಬೆಚ್ಚಿಬಿದ್ದಾರೆ. ವಿಡಿಯೋದಲ್ಲಿ ಬಾಲಕಿ ಸಾವನ್ನಪ್ಪಿದ ದಿನ ಆಕೆಯ ಜೊತೆ ಮಲತಾಯಿ ರಾಧಾ ಸಹ ಅನುಮಾನಾಸ್ಪದವಾಗಿ ಓಡಾಡಿರುವುದು ಕಂಡುಬಂದಿದೆ. ವಿಡಿಯೋ ಆಧರಿಸಿ ಬಾಲಕಿಯ ಅಜ್ಜಿಯು ಸೊಸೆ ವಿರುದ್ಧ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರಾಧಾಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸಾನ್ವಿ ತಾಯಿ ಆರು ವರ್ಷಗಳ ಹಿಂದೆ ಕಾಯಿಲೆಯಿಂದ ಮೃತಪಟ್ಟಿದ್ದರು. 2023ರಲ್ಲಿ ರಾಧಾ ಜೊತೆ ಸಿದ್ಧಾಂತ ಎರಡನೇ ವಿವಾಹವಾಗಿದ್ದು, ಅವರಿಗೆ ಇಬ್ಬರು ಅವಳಿ ಮಕ್ಕಳಿದ್ದಾರೆ. ಮಲ ಮಗಳಿಗೂ ಆಸ್ತಿ ಹಂಚಿಕೆ ಆಗುತ್ತದೆ ಎಂಬ ಕಾರಣಕ್ಕೆ ಈ ಹೇಯ ಕೃತ್ಯ ಎಸಗಿದ್ದಾಗಿ ರಾಧಾ ವಿಚಾರಣೆ ವೇಳೆ ತಪ್ರೊಪ್ಪಿಕೊಂಡಿದ್ದಾಳೆ.
In a chilling incident that has shocked the city of Bidar, a stepmother allegedly killed her 7-year-old stepdaughter by pushing her off the third floor of a building under the pretext of playing with her. The gruesome act took place in Adarsh Colony and came to light only after CCTV footage exposed the truth. The accused has been taken into judicial custody.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm