ಬ್ರೇಕಿಂಗ್ ನ್ಯೂಸ್
23-09-25 11:01 am HK News Desk ಕ್ರೈಂ
ನವದೆಹಲಿ, ಸೆ.23 : ತಮ್ಮನ್ನು ಇಡಿ ಮತ್ತು ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ಸೈಬರ್ ವಂಚಕರು ದಕ್ಷಿಣ ದೆಹಲಿಯ ಗುಲ್ಮೋಹರ್ ಪಾರ್ಕ್ ಪ್ರದೇಶದಲ್ಲಿ ನಿವೃತ್ತ ಬ್ಯಾಂಕರ್ ಒಬ್ಬರನ್ನು ಒಂದು ತಿಂಗಳ ಕಾಲ "ಡಿಜಿಟಲ್ ಅರೆಸ್ಟ್" ಬಂಧನದಲ್ಲಿರಿಸಿದ್ದಾಗಿ ಯಾಮಾರಿಸಿ ಅವರಿಂದಲೇ 23 ಕೋಟಿ ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ.
ಆರೋಪಿಗಳು ನಿಮ್ಮ ಆಧಾರ್ ಕಾರ್ಡ್ ನಂಬರ್, ಮಾದಕ ದ್ರವ್ಯ ಸಾಗಣೆ, ಭಯೋತ್ಪಾದಕರಿಗೆ ಹಣಕಾಸು ನೆರವು ಮತ್ತು ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದು, ತನಿಖೆಯ ನೆಪದಲ್ಲಿ ಫ್ಲಾಟ್ ಒಳಗೆ ಇರಬೇಕೆಂದು ಹೇಳಿ ಯಾಮಾರಿಸಿದ್ದಾರೆ. ಆತನನ್ನು ಮನೆಯಿಂದ ಹೊರಗೆ ಹೋಗದಂತೆ ಸೂಚಿಸಿದ್ದಲ್ಲದೆ, ಯಾರೊಂದಿಗೂ ಮಾತನಾಡುವಂತಿಲ್ಲ. ಇಲ್ಲದಿದ್ದರೆ ನೇರವಾಗಿ ಬಂದು ಅರೆಸ್ಟ್ ಮಾಡ್ತೀವಿ ಎಂದು ಬೆದರಿಸಿ, ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿರುವ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸುವಂತೆ ಒತ್ತಾಯಿಸಿದ್ದಾರೆ.
78 ವರ್ಷದ ನಿವೃತ್ತ ಬ್ಯಾಂಕರ್ ಮೋಸ ಹೋಗಿದ್ದು, ಆಗಸ್ಟ್ 4 ರಂದು ಮುಂಬೈ ಪೊಲೀಸ್ ಅಧಿಕಾರಿ ಎಂದು ಹೇಳಿಕೊಳ್ಳುವ ವ್ಯಕ್ತಿ ಕರೆ ಮಾಡಿದ್ದರು. ಇಡಿ ಮತ್ತು ಸಿಬಿಐ ಅಧಿಕಾರಿಗಳು ಎಂದು ಹೇಳಿಕೊಂಡು ಸಂಪರ್ಕಿಸಿದ್ದು, ವಿಷಯ ಯಾರಿಗೂ ಹೇಳದಂತೆ ಬೆದರಿಸಿದ್ದರು ಎಂದು ದೂರು ನೀಡಿದ್ದಾರೆ. ವಂಚನೆ ಜಾಲದ ಈ ಕೃತ್ಯ ಸೆಪ್ಟೆಂಬರ್ 4 ರ ವರೆಗೆ ಮುಂದುವರೆದಿತ್ತು. ಆನಂತರ ಫೋನ್ ಬರುವುದು ಕಡಿಮೆಯಾದ ಸಂದರ್ಭದಲ್ಲಿ ತಾನು ಮೋಸ ಹೋಗಿದ್ದೇನೆ ಎಂದು ತಿಳಿದು ಸೆಪ್ಟೆಂಬರ್ 19 ರಂದು NCRP ಪೋರ್ಟಲ್‌ನಲ್ಲಿ ದೂರು ದಾಖಲಿಸಿದ್ದಾರೆ.
ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಮೊತ್ತದಲ್ಲಿ 12.11 ಕೋಟಿ ರೂ.ಗಳನ್ನು ವಿವಿಧ ಬ್ಯಾಂಕ್ ಖಾತೆಗಳಲ್ಲಿ ಫ್ರೀಜ್ ಮಾಡಿದ್ದಾರೆ. ತನಿಖೆ ವೇಳೆ ಹಣವನ್ನು ಹಲವು ಖಾತೆಗಳಿಗೆ ವರ್ಗಾಯಿಸಿ, ದೇಶದ ವಿವಿಧ ಭಾಗಗಳಲ್ಲಿ ಡ್ರಾ ಮಾಡಿರುವುದು ಪತ್ತೆಯಾಗಿದೆ.
A 78-year-old former banker from South Delhi received a phone call last month. The caller, who claimed that the banker’s mobile number had been used for “fraudulent” and “illegal” activities, introduced herself as a senior official of a telecom company and later claimed that Mumbai police officers were involved in the “probe” into the incident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am