ಬ್ರೇಕಿಂಗ್ ನ್ಯೂಸ್
01-10-25 02:39 pm Mangalore Correspondent ಕ್ರೈಂ
ಮಂಗಳೂರು, ಅ.1 : ಸಾಮಾಜಿಕ ಜಾಲತಾಣದಲ್ಲಿ ಇನ್ಫೋಸಿಸ್ ಸಂಸ್ಥೆಯ ಸುಧಾಮೂರ್ತಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಹೆಸರಲ್ಲಿ ಈ ಷೇರಿನಲ್ಲಿ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ಪ್ರಚಾರ ಮಾಡುವ ವಿಡಿಯೋ ನೋಡಿ ನಿಜವೆಂದು ನಂಬಿದ ಮಂಗಳೂರಿನ ಮಹಿಳೆಯೊಬ್ಬರು 9.10 ಲಕ್ಷ ರೂ. ಕಳೆದುಕೊಂಡಿದ್ದಾರೆ. ಈ ಬಗ್ಗೆ ನಗರದ ಉರ್ವ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆ.26ರಂದು ಮಹಿಳೆ ಫೇಸ್‌ಬುಕ್ ನೋಡುತ್ತಿದ್ದಾಗ ಸುಧಾಮೂರ್ತಿ ಹಾಗೂ ನಿರ್ಮಲಾ ಸೀತಾರಾಮನ್ ಅವರು ಹೂಡಿಕೆ ಬಗ್ಗೆ ಪ್ರಚಾರ ಮಾಡುವ ಎಐ ವಿಡಿಯೋ ನೋಡಿದ್ದಾರೆ. ವಿಡಿಯೋದಲ್ಲಿ ಈ ಷೇರಿನಲ್ಲಿ ಹಣ ಹೂಡಿದರೆ ನಿಮ್ಮ ಹಣ ಡಬಲ್ ಆಗೋದು ಖಚಿತ, ಇದಕ್ಕೆ ಕೇಂದ್ರ ಸರ್ಕಾರ ಗ್ಯಾರಂಟಿ ನೀಡುತ್ತದೆ ಎಂಬಿತ್ಯಾದಿಯಾಗಿ ಜನರನ್ನು ನಂಬಿಸುವ ರೀತಿ ವಿಡಿಯೋಗಳಿದ್ದವು.
ಇದನ್ನು ನಂಬಿದ ಮಹಿಳೆ, ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ತನ್ನ ಹೆಸರು ನೋಂದಣಿ ಮಾಡಿದ್ದಾರೆ. ಅದೇ ದಿನ ಅವರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಹೂಡಿಕೆ ಮಾಡಲು 20,664 ರೂ. ಹಣ ಪಾವತಿಸುವಂತೆ ತಿಳಿಸಿದ್ದಾನೆ. ಅದರಂತೆ ಮಹಿಳೆ ಹಣ ಡಿಕೆ ಪಾವತಿಸಿದ್ದಾರೆ.
ಆನಂತರ ವ್ಯಕ್ತಿ ತಿಳಿಸಿದಂತೆ ಆ ಕಂಪನಿಯ ವೆಬ್‌ಸೈಟ್‌ನಲ್ಲಿ ಲಾಗಿನ್ ಕೂಡ ಆಗಿದ್ದಾರೆ. ಅದೇ ದಿನ ಇನ್ನೊಬ್ಬ ಅಪರಿಚಿತ ವ್ಯಕ್ತಿ ಮೆಸೇಜ್ ಮತ್ತು ಕರೆ ಮಾಡಿ ಹೂಡಿಕೆ ಮೂಲಕ ಹೆಚ್ಚು ಹಣ ಲಾಭ ಗಳಿಸಬಹುದು ಎಂದು ತಿಳಿಸಿದ್ದಾನೆ. ಅದರಂತೆ, ಡಬಲ್ ಆಗುತ್ತೆ ಎಂಬ ನಂಬಿಕೆಯಲ್ಲಿ 8.90 ಲಕ್ಷ ರೂ. ಹಣ ವರ್ಗಾವಣೆ ಮಾಡಿದ್ದಾರೆ. ಹೀಗೆ ಒಟ್ಟು 9,10,664 ರೂ. ಹೂಡಿಕೆ ಮಾಡಿದ್ದು ಬಳಿಕ ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟಬೇಕು ಎಂದು ಹೇಳಿದ್ದು ಮಹಿಳೆ ತಾನು ಮೋಸ ಹೋಗಿರುವ ಶಂಕೆ ಉಂಟಾಗಿದೆ. ಇದರಿಂದ ಮಹಿಳೆ ಪೊಲೀಸ್ ದೂರು ನೀಡಿದ್ದು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.
A woman from Mangaluru lost ₹9.10 lakh after believing an AI-generated video circulating on Facebook that used the names of Infosys Foundation’s Sudha Murty and Union Finance Minister Nirmala Sitharaman. The video falsely claimed that investments in a certain scheme would double with government guarantee.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am