ಬ್ರೇಕಿಂಗ್ ನ್ಯೂಸ್
03-10-25 11:28 pm HK News Desk ಕ್ರೈಂ
ಕಾರ್ಕಳ, ಅ.3 : ಪ್ರೀತಿಸಿದ ಯುವಕನೊಂದಿಗೆ ಮನೆ ಬಿಟ್ಟು ಹೋಗುತ್ತೇನೆಂದ ಹದಿಹರೆಯದ ಮಗಳನ್ನು ತಾಯಿಯೇ ಹತ್ಯೆಗೈದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಹಿರ್ಗಾನ ನಿವಾಸಿ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17) ಮೃತಳು. ಆರೋಪಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರದಲ್ಲಿ ಜಗಳ ಉಂಟಾಗಿತ್ತು.
ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದರಿಂದ ಕುಪಿತಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ನಂತರ, ಶಿಫನಾಝ್ ತಂದೆ ಮುಸ್ತಫಾ ಅವರು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು. ಪೊಲೀಸರು ಹೆತ್ತವರನ್ನು ವಿಚಾರಿಸಿದಾಗ ಸತ್ಯ ಹೊರಬಂದಿದೆ. ತಾಯಿಯೇ ಮರ್ಯಾದೆಗಂಜಿ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾಳೆ.
ಅ.2ರಂದು ಆರೋಪಿಯನ್ನು ಕಾರ್ಕಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A shocking incident has come to light in Hirgana village, Karkala taluk, where 17-year-old Shifanaz was strangled to death by her mother, Gulzar Banu (45), after expressing her wish to elope with her lover. Initially reported as a suicide by the girl’s father, postmortem findings revealed death by strangulation. During police interrogation, the mother confessed to the crime, stating it was committed in anger over her daughter’s relationship. She has been arrested and remanded to judicial custody.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm