ಬ್ರೇಕಿಂಗ್ ನ್ಯೂಸ್
17-10-25 03:27 pm Bangalore Correspondent ಕ್ರೈಂ
ಬೆಂಗಳೂರು, ಅ.17 : ಪ್ರೀತಿಸಲು ನಿರಾಕರಿಸಿದ ಸಿಟ್ಟಿನಲ್ಲಿ ಯುವಕನೊಬ್ಬ 21 ವರ್ಷದ ಯುವತಿಗೆ ಚಾಕುವಿನಿಂದ ಇರಿದು ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಬೆಂಗಳೂರಿನ ಶ್ರೀರಾಂಪುರ ರೈಲ್ವೆ ಹಳಿಯ ಬಳಿ ನಡೆದಿದೆ. ಸ್ಥಳೀಯ ನಿವಾಸಿ, ಬಿ ಫಾರ್ಮಾ ಕಲಿಯುತ್ತಿದ್ದ ಯಾಮಿನಿ ಪ್ರಿಯಾ (20) ಕೊಲೆಯಾದಾಕೆ.
ಶ್ರೀರಾಂಪುರ ಸಮೀಪದ ಸ್ವತಂತ್ರ ಪಾಳ್ಯದಲ್ಲಿ ವಾಸವಿದ್ದ ಯಾಮಿನಿ ಬನಶಂಕರಿ 3ನೇ ಹಂತದ ಖಾಸಗಿ ಕಾಲೇಜು ಒಂದರಲ್ಲಿ ಬಿ ಫಾರ್ಮಾ ಓದುತ್ತಿದ್ದಳು. ಇವರ ಮನೆಯ ಪಕ್ಕದಲ್ಲೇ ವಾಸವಿದ್ದ ವಿಘ್ನೇಶ್ ಎಂಬಾತನೇ ಈ ದುಷ್ಕೃತ್ಯ ಎಸಗಿದವನು. ಯುವತಿಯನ್ನು ಪ್ರೀತಿಸುವ ನೆಪದಲ್ಲಿ ವಿಘ್ನೇಶ್ ಬೆನ್ನು ಬಿದ್ದಿದ್ದ. ಯುವತಿಗೆ ಇಷ್ಟವಿಲ್ಲದ ಕಾರಣ ಪ್ರೀತಿ ನಿರಾಕರಿಸಿದ್ದಳು. ಇದೇ ಸಿಟ್ಟಿನಲ್ಲಿ ಯುವತಿ ಕಾಲೇಜಿನಿಂದ ಮನೆಗೆ ಬರುವುದನ್ನೆ ಕಾದು ಕಾದು ಕುಳಿತು ಕೊಲೆ ಮಾಡಿದ್ದಾನೆ.

ಶ್ರೀರಾಂಪುರ ಬಸ್ ನಿಲ್ದಾಣ ಬಿಟ್ಟು ಅಲ್ಲಿಂದ ರೈಲ್ವೆ ಹಳಿಯ ಪಕ್ಕದ ಕಾಲು ದಾರಿಯಲ್ಲಿ ಯಾಮಿನಿ ಎಂದಿನಂತೆ ತನ್ನ ಮನೆಗೆ ಹೋಗುತ್ತಿದ್ದಳು. ಆಕೆಯನ್ನು ವಿಘ್ನೇಶ್ ಹಿಂಬಾಲಿಸಿದ್ದು ಆಕೆಯ ಕಣ್ಣಿಗೆ ಖಾರದ ಪುಡಿ ಎರಚಿ ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಚಾಕುವಿನಿಂದ ಮೂರ್ನಾಲ್ಕು ಬಾರ ಇರಿದಿದ್ದಾನೆ. ನಂತರ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವಿಘ್ನೇಶ್ ಚಾಕುವಿನಿಂದ ಇರಿಯುವಾಗ ಯಾಮಿನಿ ಚೀರಾಡಿದ್ದಾಳೆ. ಸ್ಥಳೀಯರು ಕೂಡಲೇ ಸ್ಥಳಕ್ಕೆ ಹೋಗಿದ್ದು ಆರೋಪಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಯಾಮಿನಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾಳೆ. ವಿಘ್ನೇಶ್ ವಿರುದ್ಧ ಹಿಂದಿನಿಂದ ಬರುವುದು, ಚುಡಾಯಿಸುವ ಆರೋಪದಲ್ಲಿ ಈ ಹಿಂದೆಯೇ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕರೆದು ಎಚ್ಚರಿಕೆ ನೀಡಿ ಕಳುಹಿಸಿದ್ದರು.
A shocking murder took place near the railway tracks in Srirampura, Bengaluru, where a 21-year-old college student, Yamini Priya, was brutally killed by her neighbour Vignesh after she refused his love proposal.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am