ಬ್ರೇಕಿಂಗ್ ನ್ಯೂಸ್
23-10-25 06:53 pm Mangalore Correspondent ಕ್ರೈಂ
ಮಂಗಳೂರು, ಅ.23 : ಮಂಗಳೂರಿನ ಮಹಿಳೆಯೊಬ್ಬರಿಂದ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ವಂಚಕರು 42 ಲಕ್ಷ ಹಣವನ್ನು ಲಪಟಾಯಿಸಿದ ಘಟನೆ ನಡೆದಿದ್ದು ಹಣ ಕಳಕೊಂಡ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಸಂತ್ರಸ್ತ ಮಹಿಳೆಗೆ ಅಕ್ಟೋಬರ್ 7 ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು, ಮುಂಬೈ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುವುದಾಗಿ ತಿಳಿಸಿದ್ದಾನೆ.
ಈ ವೇಳೆ ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಕಾರ್ಡನ್ನು ಪಡೆಯಲಾಗಿದ್ದು, ಅದರಲ್ಲಿ ಮೋಸದ ಕರೆಯನ್ನು ಮತ್ತು ಸಾರ್ವಜನಿಕರಿಗೆ ಸಂಶಯಾಸ್ಪದ ಲಿಂಕ್ ಗಳನ್ನು ಕಳಿಸುತ್ತಿದ್ದೀರಿ (Fraud calls & sending suspisious links to public) ಎಂದು ಹೇಳಿದ್ದು ನಿಮ್ಮ ವಿರುದ್ಧ ಪ್ರಕರಣ ದಾಖಲಾಗಿದೆ. ಹಾಗಾಗಿ ವಿಚಾರಣೆಗಾಗಿ ಮುಂಬೈಗೆ ಬರುವಂತೆ ತಿಳಿಸಿದ್ದ.
ಮುಂಬೈಗೆ ಬರಲು ಆಗುವುದಿಲ್ಲ ಎಂದು ಹೇಳಿದ್ದಕ್ಕೆ, ವಂಚಕರು ಮಹಿಳೆಯಿಂದ ಸ್ವತಃ ಲೆಟರ್ ಬರೆಯಿಸಿಕೊಂಡು ಅದನ್ನು ವಾಟ್ಸ್ ಆಪ್ ಮಾಡಿದ್ದರು. ಬಳಿಕ ವಾಟ್ಸ್ ಆಪ್ ವಿಡಿಯೋ, ಆಡಿಯೋ ಕರೆ ಮಾಡಿ, ಸಿ.ಬಿ.ಐ ಐಪಿಎಸ್ ಆಫೀಸರ್, ಆರ್ ಬಿ ಐ ಮತ್ತು ಸುಪ್ರಿಂ ಕೋರ್ಟ್ ಜಡ್ಜ್ ಗೆ ಎಂದು ಹೇಳಿ ಸಂಪರ್ಕಿಸಿದ್ದಾರೆ. ಬಳಿಕ ಮಹಿಳೆಯ ಬ್ಯಾಂಕ್ ಖಾತೆ ಇನ್ನಿತರ ವೈಯಕ್ತಿಕ ವಿವರಗಳನ್ನು ಕೇಳಿ ಪಡೆದಿದ್ದಾರೆ.
ಮರುದಿನ ಸಂತ್ರಸ್ತ ಮಹಿಳೆಗೆ ಕರೆ ಮಾಡಿ ವಂಚಕರು ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ಹೇಳಿ ಹಣ ಪಾವತಿಸಲು ತಿಳಿಸಿದ್ದಾರೆ. ಅಲ್ಲದೆ, ಎಲ್ಲ ಹಣವನ್ನು ಹಿಂತಿರುಗಿಸುತ್ತೇವೆ, ಈ ವಿಷಯಯನ್ನು ಯಾರಿಗೂ ತಿಳಿಸಬಾರದೆಂದು ಮಹಿಳೆಯನ್ನು ನಂಬಿಸಿದ್ದಾರೆ. ಮಹಿಳೆ ಭಯಗೊಂಡು ಯಾರಿಗೂ ವಿಷ ತಿಳಿಸಿರಲಿಲ್ಲ. ಆನಂತರ, 08-10-2025ರಿಂದ 17-10-2025ರ ವರೆಗೆ ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 42,00,150/- ರೂ.ಗಳನ್ನು ಅಪರಿಚಿತ ವ್ಯಕ್ತಿಯು ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ RTGS ಮೂಲಕ ವರ್ಗಾವಣೆ ಮಾಡಿರುತ್ತಾರೆ. ಇನ್ನೂ ಹೆಚ್ಚಿನ ಹಣ ವರ್ಗಾಯಿಸುವಂತೆ ಒತ್ತಾಯಿಸಿದ್ದು ಇದರಿಂದ ಭಯಗೊಂಡು ತನ್ನ ಮಕ್ಕಳಿಗೆ ಹಾಗೂ ತಂಗಿಗೆ ವಿಚಾರ ತಿಳಿಸಿದಾಗ ಮೋಸ ಹೋಗಿರುವ ವಿಚಾರ ಗೊತ್ತಾಗಿತ್ತು.
A shocking case of cyber fraud has been reported from Mangaluru, where a woman lost ₹42 lakh after falling prey to a so-called “digital arrest” scam.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am