ಬ್ರೇಕಿಂಗ್ ನ್ಯೂಸ್
01-11-25 03:31 pm Mangalore Correspondent ಕ್ರೈಂ
ಮಂಗಳೂರು, ನ.1 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ 25ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದ ನಟೋರಿಯಸ್ ರೌಡಿ ಟೋಪಿ ನೌಫಾಲ್ (38) ಎಂಬಾತನನ್ನು ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೇ ಗೇಟ್ ಬಳಿ ಬರ್ಬರವಾಗಿ ಕಡಿದು ಕೊಲೆ ಮಾಡಲಾಗಿದೆ.
ಟೋಪಿ ನೌಫಾಲ್ ಮಂಗಳೂರು ನಗರದ ಬಜಾಲ್ ಫೈಸಲ್ ನಗರ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಡ್ರಗ್ಸ್ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಿದ ಬಳಿಕ ಕಾಸರಗೋಡು ಭಾಗದಲ್ಲಿ ಸಕ್ರಿಯವಾಗಿದ್ದ. ಇಂದು ಬೆಳಗ್ಗೆ 8 ಗಂಟೆ ವೇಳೆಗೆ ಉಪ್ಪಳ ಗೇಟ್ ಬಳಿಗೆ ಕರೆಸಿದ್ದ ತಂಡ ಅಲ್ಲಿಯೇ ತಲವಾರುಗಳಿಂದ ಕಡಿದು ಹಾಕಿದೆ ಎನ್ನಲಾಗುತ್ತಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತೆರಳಿದ್ದು ಶವವನ್ನು ಪೆರಿಯಾರಂ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿದ್ದು ಪೋಸ್ಟ್ ಮಾರ್ಟಂ ಬಳಿಕ ಕೊಲೆಯ ಬಗ್ಗೆ ತಿಳಿಯಬಹುದು ಎಂದಿದ್ದಾರೆ.
ರೈಲ್ವೇ ಟ್ರಾಕ್ ಬಳಿಯಲ್ಲೇ ಶವ ಬಿದ್ದಿದ್ದು ತಲೆ, ಕುತ್ತಿಗೆ ಭಾಗಕ್ಕೆ ಕಡಿದ ಗುರುತುಗಳಿವೆ. ಅಲ್ಲದೆ, ಶವದ ದೇಹದಲ್ಲಿ ಬನಿಯಾನ್ ಮತ್ತು ಪ್ಯಾಂಟ್ ಮಾತ್ರ ಇದ್ದು ಹೊಡೆದಾಟ ಸಂದರ್ಭದಲ್ಲಿ ಶರ್ಟ್ ಎಳೆದುಕೊಂಡು ಹೋಗಿದೆಯಾ ಎನ್ನುವ ಸಂಶಯ ಇದೆ. ಸ್ಥಳಕ್ಕೆ ಸ್ಕೂಟರಿನಲ್ಲಿ ತೆರಳಿದ್ದ ಎನ್ನುವ ಮಾಹಿತಿ ಇದೆ. ಟೋಪಿ ನೌಫಾಲ್ ಮಂಗಳೂರಿನಲ್ಲಿ ನಟೋರಿಯಸ್ ರೌಡಿ ಜೊತೆಗೆ ಡ್ರಗ್ಸ್ ಸೇವನೆ ಮತ್ತು ವಹಿವಾಟಿನಲ್ಲಿ ಗುರುತಿಸಿಕೊಂಡಿದ್ದ. 2017ರಲ್ಲಿ ಫರಂಗಿಪೇಟೆಯಲ್ಲಿ ನಡೆದ ಜಿಯಾ ಮತ್ತು ಇನ್ನೊಬ್ಬನ ಡಬಲ್ ಮರ್ಡರ್ ಕೇಸಿನಲ್ಲಿ ಪ್ರಮುಖ ಆರೋಪಿಯಾಗಿದ್ದ. ಆ ಸಂದರ್ಭದಲ್ಲಿ ಮಾರಿಪಳ್ಳ ಜಬ್ಬಾರ್, ತಲ್ಲತ್ ಗ್ಯಾಂಗ್ ಜೊತೆಗೆ ಗುರುತಿಸಿಕೊಂಡಿದ್ದ.
ತಲ್ಲತ್ ಮತ್ತು ಜಬ್ಬಾರ್ ನ್ಯೂಟ್ರಲ್ ಆದಬಳಿಕ ನೌಫಾಲ್ ತನ್ನದೇ ತಂಡ ಕಟ್ಟಿಕೊಂಡು ಕೊಲೆಯತ್ನ, ವಸೂಲಿ, ಡ್ರಗ್ಸ್, ಅಕ್ರಮ ಗೋಲ್ಡ್ ವಹಿವಾಟಿನಲ್ಲಿ ಸಕ್ರಿಯವಾಗಿದ್ದ. ಕಂಕನಾಡಿ ನಗರ, ವಾಮಂಜೂರು, ಸುರತ್ಕಲ್, ಕಾವೂರು ಸೇರಿ ಹಲವಾರು ಕಡೆಗಳಲ್ಲಿ ಕೇಸುಗಳನ್ನು ಹೊಂದಿದ್ದಾನೆ. ಜಿಯಾ ಕೊಲೆ ಕೇಸಿನಲ್ಲಿ ಈತನೇ ಪ್ರಮುಖ ಆರೋಪಿಯಾಗಿದ್ದ. ಇದೀಗ ಉಪ್ಪಳ ಗೇಟ್ ಬಳಿಯಲ್ಲಿ ಕೊಲೆ ಆಗಿರುವುದರಿಂದ ಅಲ್ಲಿನದ್ದೇ ಗ್ಯಾಂಗ್ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ. ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a shocking early-morning incident, notorious rowdy “Topi” Naufal (38) — who was facing more than 25 criminal cases under the Mangaluru Police Commissionerate — was brutally hacked to death near the Uppala railway gate under Manjeshwar Police limits on Friday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am